Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    April 30, 2025
    Share

    ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಇಂದು ಗೋವಾ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

    ಬಂಧಿತ ಆರೋಪಿ ಕಂಡ್ಲೂರು ಕಾವ್ರಾಡಿ ನಿವಾಸಿ ಮುಸೀನ್ ಸಾಹೇಬ್(29) ಎಂದು ಗುರುತಿಸಲಾಗಿದೆ.

    ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತ 2017ರಲ್ಲಿ ಕುಂದಾಪುರ ನ್ಯಾಯಾಲಯ ದಿಂದ ಜಾಮೀನು ಪಡೆದುಕೊಂಡಿದ್ದನು. ಆ ಬಳಿಕ ಆತ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

    ಈ ಸಂಬಂಧ ಈತನ ವಿರುದ್ಧ ಒಟ್ಟು 13 ಬಾರಿ ದಸ್ತಗಿರಿ ವಾರೆಂಟನ್ನು ಹೊರಡಿಸಲಾಗಿತ್ತು. ಈತ ಹೊರದೇಶಕ್ಕೆ ಹೋಗಿರಬಹುದೆಂಬ ಸಂಶಯದಲ್ಲಿ ಆತನ ವಿರುದ್ದ ಎಲ್.ಓ.ಸಿ.ಯನ್ನು ತೆರೆಸಲಾಗಿತ್ತು. ಅದರಂತೆ ಮುಸೀನ್ ಗೋವಾ ರಾಜ್ಯದ ದಾಬೋಲಿಮ್ ಏರ್ ಪೋರ್ಟ್‌ಗೆ ಬಂದಿಳಿರುವ ಮಾಹಿತಿ ಬಂದಿದ್ದು, ಅದರಂತೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

    Post Views: 161

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.