Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ನ್ಯಾಯಾಲಯಕ್ಕೆ ಹಾಜರಾಗದೆ 14ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ನ್ಯಾಯಾಲಯಕ್ಕೆ ಹಾಜರಾಗದೆ 14ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

    September 1, 2024
    Share

    ಮೂಡುಬಿದಿರೆ: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮೂಡುಬಿದಿರೆ ಪೊಲೀಸರ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಮಂಗಳೂರು ತಾಲೂಕು ಕೊಳವೂರಿನ ಅಯ್ಯನ ಮನೆ ನಿವಾಸಿ ರಮೇಶ (38) ಬಂಧಿತ ಆರೋಪಿ. ಮೂಡುಬಿದಿರೆಯ ಗಾಂಧಿನಗರದ ನ್ಯೂ ಕಿರಣ್ ಫ್ಯಾಕ್ಟರಿಗೆ ಬ್ಯಾಂಕೊಂದರಿಂದ 2010ರಲ್ಲಿ ಸಾಲ ಪಡೆದುಕೊಳ್ಳಲಾಗಿತ್ತು.

    ಅದನ್ನು ಹಿಂದಿರುಗಿ ಪಾವತಿಸಿಲ್ಲ ಎಂದು ಆರೋಪಿಸಿ ಬ್ಯಾಂಕ್‌ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ಆದೇಶದ ಅನ್ವಯ ಬ್ಯಾಂಕ್ ನ ವ್ಯವಸ್ಥಾಪಕರಾದ ಎಲ್.ಸಿ. ಸಿಂದಗೇರಿ ಅವರು ಫ್ಯಾಕ್ಟರಿಯ ಸ್ಥಿರಾಸ್ತಿ ಹಾಗೂ ಸೊತ್ತುಗಳನ್ನು 2010 ಸೆಪ್ಟೆಂಬರ್ 6ರಂದು ಜಪ್ತಿ ಮಾಡಿ ಸೀಲ್ ಮಾಡಿಸಿದ್ದರು. ಅಲ್ಲದೆ, ಕಾವಲುಗಾರನನ್ನು ನೇಮಿಸಿದ್ದರು.

    ಆದರೆ, ಆರೋಪಿ ರಮೇಶ ಸಹಿತ ಫ್ಯಾಕ್ಟರಿಯ ಮೆನೇಜಿಂಗ್ ಡೈರೆಕ್ಟರ್ ಎಂ.ಎಂ. ಮಹದೇವಪ್ಪ, ಹರೀಶ ಶೆಟ್ಟಿ, ಹರೀಶ, ನಾಗೇಶ, ರಾಮಚಂದ್ರ ಮೊದಲಾದವರು 2010ರ ಸೆ.18ರಂದು ರಾತ್ರಿ ಮಾರಕಾಸ್ತ್ರಗಳೊಂದಿಗೆ ಸೀಲ್ ಮಾಡಿದ್ದ ಫ್ಯಾಕ್ಟರಿಯ ಬೀಗ ಮುರಿದು ಗಾವಲುಗಾರನಿಗೆ ಬೆದರಿಕೆ ಹಾಕಿದ್ದರು. ಈ ಸಂಬಂಧ ಬ್ಯಾಂಕ್ ನ ವ್ಯವಸ್ಥಾಪಕರಾದ ಎಲ್.ಸಿ. ಸಿಂದಗೇರಿ ಅವರು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರಮೇಶನನ್ನು ಪತ್ತೆಹಚ್ಚಿದ ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ.ಅವರ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆರೋಪಿಯ ಪತ್ತೆ ಕಾರ್ಯದಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಕೃಷ್ಣಪ್ಪ, ಸಿದ್ದಪ್ಪ ನರನೂರ, ಸಿಬ್ಬಂದಿಗಳಾದ ರಾಜೇಶ, ಸುರೇಶ, ದಿಲೀಪ್ ಮತ್ತು ವೆಂಕಟೇಶ ಭಾಗವಹಿಸಿದ್ದರು.

    Post Views: 148

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.