ಮಂಗಳೂರು: ಕಳೆದ ಐದು ದಿನಗಳ ಹಿಂದೆ ಮಂಗಳೂರು ಹೊರವಲಯದ ಬಜ್ಪೆಯಲ್ಲಿ ನಡೆದ ಹತ್ಯೆ ಪ್ರಕರಣ ಕರಾವಳಿಯನ್ನು ಬೆಚ್ಚಿಬೀಳಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ಗಳು ಒಮ್ಮೆಲೆ ಪೊಲೀಸರನ್ನು ದಿಗ್ಭ್ರಮೆಗೊಳಿಸಿತ್ತು. ರಾತ್ರಿ ಒಂಭತ್ತು ಮೂವತ್ತಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ ಎಂದು ಸಂದೇಶ ಬಂದಿರುವ ಕಾರಣ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

ಜಿಲ್ಲೆಯಲ್ಲಿ ನಿನ್ನೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು 9.30 ರೊಳಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿತ್ತು. ಇನ್ನೂ ಕೆಲವು ದಿನ ಇದೇ ಕ್ರಮ ಮುಂದುವರೆಯಲಿದ್ದು ಒಂಭತ್ತು ಮೂವತ್ತರ ಒಳಗೆ ಎಲ್ಲವೂ ಬಂದ್ ಆಗಲಿದೆ.
ಜನರ ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಅನುಷ್ಠಾನಕ್ಕೆ ತರಲಾಗಿದೆ. ಭದ್ರತೆ ನಿರ್ವಹಿಸಲು ಜಿಲ್ಲೆಯ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.