ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್ ಗಳನ್ನು ತೆರೆಯಲಾಗಿದೆ.
ವಾಹನಗಳನ್ನು ತಡೆದು ನಿಲ್ಲಿಸಿ ಮಾಹಿತಿ ಪಡೆಯುವ ಜತೆಗೆ ಮೊಬೈಲ್ ಸಂಖ್ಯೆಯನ್ನೂ ನಮೂದಿಸಿ ಕೊಳ್ಳಲಾಗುತ್ತಿದೆ. ಎಸ್ಪಿ, ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈ ಎಸ್ಪಿ, ಇನ್‌ಸ್ಪೆಕ್ಟರ್‌ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ.
ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಹಾಗೂ ಸುಭಾಷ್ ಚಂದ್ರ ಬೋಸ್ ಭಾವಚಿತ್ರಗಳಗೊಂಡ ಫ್ಲೆಕ್ಸ್ ಹಾಕಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಂದೋ ಬಸ್ತ್ ಮಂಗಳವಾರವೂ ಮುಂದುವರಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳು ತಿಳಿಸಿದ್ದಾರೆ.
ಬೆಳ್ಳಾರೆ, ಸುರತ್ಕಲ್‌ನಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಬಿಗು ಬಂದೋಬಸ್ತು ಜಾರಿಯಲ್ಲಿದ್ದು, ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದಾರೆ. ಶಿವಮೊಗ್ಗ ಘಟನೆಯ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಯಾವುದೇ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.