Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ, ರಿಯಲ್ ಎಸ್ಟೇಟ್ ನಡೆಸಲು ಅವಕಾಶ ಇಲ್ಲ : ಹೈಕೋರ್ಟ್ ತೀರ್ಪು
    ಇತ್ತೀಚಿನ ಸುದ್ದಿ

    ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ, ರಿಯಲ್ ಎಸ್ಟೇಟ್ ನಡೆಸಲು ಅವಕಾಶ ಇಲ್ಲ : ಹೈಕೋರ್ಟ್ ತೀರ್ಪು

    November 21, 2025
    Share

    ಬೆಂಗಳೂರು : ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಖಡಕ್ ತೀರ್ಪು ನೀಡಿದೆ. ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಜಾಗ ಸರ್ಕಾರಕ್ಕೆ ಸೇರಿದ್ದು. ಸರ್ಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರ್ಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು ಎಂದು ಹೈಕೋರ್ಟ್ ಹೇಳಿತು.

    ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರ್ಕಾರಿ ಶಾಲೆ ಕಾಂಪೌಂಡ್ ಗೋಡೆ ಹಾಗೂ ಗ್ರಾಮದ ರಸ್ತೆಯ ಸರ್ಕಾರಿ ಜಾಗದಲ್ಲಿ ಕಟ್ಟಲಾಗಿರುವ ಮಳಿಗೆಗಳ ತೆರವಿಗೆ ತಹಶೀಲ್ದಾರ್ ಜಾರಿಗೊಳಿಸಿರುವ ನೋಟಿಸ್ ಪ್ರಶ್ನಿಸಿ ಗ್ರಾಮದ ವಿರಾಟ್ ಹಿಂದೂ ಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಜಾಮೀಯಾ ಮಸ್ಜಿದ್ ಕಮಿಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

    ಅರ್ಜಿದಾರರು ಮಳಿಗೆಗಳನ್ನು ಕಟ್ಟಿರುವ ಜಾಗ ಸರ್ಕಾರಿ ಜಮೀನು ಎಂದು ಗೊತ್ತಾದಾಗ, ಸರ್ಕಾರಿ ಜಾಗದಲ್ಲಿ ಧಾರ್ಮಿಕ ಸಂಸ್ಥೆಗಳ ಕೆಲಸ ಏನಿದೆ?, ಮಳಿಗೆಗಳನ್ನು ಕಟ್ಟಿ ಅವುಗಳನ್ನು ಬಾಡಿಗೆಗೆ ಕೊಟ್ಟು ಬಾಡಿಗೆ ವಸೂಲಿ ಮಾಡುತ್ತಿರುವುದು ಯಾವ ಆಧಾರದಲ್ಲಿ ಮತ್ತು ಯಾವ ಉದ್ದೇಶಕ್ಕೆ? ಇದು ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ಅಲ್ಲದೆ ಮತ್ತೇನಿಲ್ಲ. ಈ ರೀತಿ ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಿಸುವುದಕ್ಕೆ ಮತ್ತು ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್​ಗೆ ಅವಕಾಶ ನೀಡಲಾಗದು.

    ಹೀಗಿದ್ದಾಗ, ಮಳಿಗೆ ಕಟ್ಟಿ ಬಾಡಿಗೆ ವಸೂಲಿ ಮಾಡುವುದು ಏಕೆ? ಎರಡೂ ಧರ್ಮದವರು ಅರ್ಜಿ ಸಲ್ಲಿಸಿದ್ದಾರೆ. ‘ರಾಮ್-ರಹೀಮ್‘ ಸೇರಿ ಬಂದಿರುವುದೇ ಅನುಮಾನಗಳನ್ನು ಹುಟ್ಟುಹಾಕುತ್ತಿದೆ ಎಂದು ತಿಳಿಸಿತು.ಜಾಗ ಮಂಜೂರು ಪ್ರಸ್ತಾವನೆ ಜಿಲ್ಲಾಧಿಕಾರಿಗಳ ಮುಂದಿದ್ದರೆ ಅವರ ಬಳಿ ಹೋಗಿ, ಜಾಗ ಮಂಜೂರು ಮಾಡುವುದು ಅವರಿಗೆ ಬಿಟ್ಟಿದ್ದು. ಸದ್ಯಕ್ಕಂತೂ ಜಾಗ ಸರ್ಕಾರಕ್ಕೆ ಸೇರಿದ್ದು. ಸರ್ಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರ್ಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು ಎಂದು ನ್ಯಾಯಪೀಠ ಹೇಳಿತು.

    Post Views: 159

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.