ಮಂಗಳೂರು:ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿ 3,700 ಕೋಟಿಯ ಯೋಜನೆಗಳಿಗೆ ಚಾಲನೆ ಕೊಟ್ಟು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಮೋದಿ ಭಾಷದಲ್ಲಿ ಏನೇನಿದೆ?
ಇಂದು ಭಾರತದ ಸಮುದ್ರ ಶಕ್ತಿಗೆ ದೊಡ್ಡ ದಿನ.ಆರ್ಥಿಕ ಸುರಕ್ಷತೆಯಲ್ಲಿ ಭಾರತ ದೊಡ್ಡ ಸಾಧನೆ ಮಾಡಿದೆ. ಕೆಲಹೊತ್ತಿನ ಹಿಂದೆ ಐಎನ್ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿದ್ದೇನೆ. ಮಂಗಳೂರಲ್ಲಿ 3,800 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದೆ. 8 ವರ್ಷಗಳಲ್ಲಿ ಕರ್ನಾಟಕಕ್ಕೆ 70 ಸಾವಿರ ಕೋಟಿಯ ಹೈವೇ ಸಿಕ್ಕಿದೆ. ಮಂಗಳೂರು-ಚೆನ್ನೈ ಎಕ್ಸ್ಪ್ರೇಸ್ ವೇ ಆಗ್ತಿದೆ. ಬೆಂಗಳೂರು-ಮೈಸೂರು ಹೈವೇ ಯೋಜನೆ ಆಗ್ತಿದೆ ಎಂದು ಹೇಳಿದರು.
ಮಂಗಳೂರು ಬಂದರು ವಿಸ್ತರಣೆ ಆಗಿದೆ. ಮಂಗಳೂರಿನ ಮೀನುಗಾರರ ಗಳಿಕೆ ಹೆಚ್ಚಿಸಲು ಯೋಜನೆ ತಂದಿದ್ದೇವೆ. ಕರ್ನಾಟಕದ ಜನತೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಈ ಯೋಜನೆಗಳಿಂದ ಕರ್ನಾಟಕದಲ್ಲಿ ವ್ಯಾಪಾರ ಹೆಚ್ಚಳವಾಗಲಿದೆ. ಕರ್ನಾಟಕದಲ್ಲಿ ಉದ್ಯೋಗ, ಉದ್ದಿಮೆ ಹೆಚ್ಚಾಗಲಿದೆ ಎಂದು ಹೇಳಿದರು. ಮೇಕ್ ಇನ್ ಇಂಡಿಯಾ ವಿಸ್ತರಣೆ ಅತ್ಯಂತ ಮುಖ್ಯವಾಗಿದೆ.
ರೈತರು,ಮೀನುಗಾರರು ಅಂತಾರಾಷ್ಟ್ರೀಯ ಮಟ್ಟಕ್ಕೇರಲು ಈ ಯೋಜನೆಗಳು ಸಹಕಾರಿಯಾಗಲಿದೆ.
ಅಭಿವೃದ್ಧಿ ಭಾರತಕ್ಕೆ ಜಗತ್ತಿನೆಲ್ಲೆಡೆ ನಮ್ಮ ವಸ್ತುಗಳು ಮಾರಾಟವಾಗ್ಬೇಕುದೊಡ್ಡ ಯೋಜನೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗ್ತಿದೆ. ಭಾರತ್ ಮಾಲಾ, ಸಾಗರ್ ಮಾಲಾ ಯೋಜನೆಗಳ ಮೂಲಕ ಶಕ್ತಿ ಕೊಡಲಾಗ್ತಿದೆ. ಮಂಗಳೂರು ಬಂದರಿನಲ್ಲಿ ಹೊಸ ತಂತ್ರಜ್ಞಾನಗಳನ್ನ ಅಳವಡಿಸಲಾಗಿದೆ. ಇಂದು 4 ಯೋಜನೆಗಳ ಶಿಲಾನ್ಯಾಸ ಆಗಿದೆ. ಇದರಿಂದ ಕರ್ನಾಟಕ, ದೇಶದ ಅಭಿವೃದ್ಧಿ ಆಗಲಿದೆ ಎಂದರು.
ಅಮೃತ ಕಾಲದಲ್ಲಿ ಭಾರತ ಹಸಿರು ಅಭಿವೃದ್ಧಿಯತ್ತ ಚಿತ್ತ ಹರಿಸಿದೆ. ಇಲ್ಲಿನ ರಿಫೈನರಿಯಲ್ಲಿ ಹೊಸ ಯೋಜನೆಗಳನ್ನು ಅಳವಡಿಸಲಾಗಿದೆ.ನಮ್ಮ ರಿಫೈನರಿ ನದಿ ನೀರಿನ ಮೇಲೆ ಅವಲಂಬಿತವಾಗಿದೆ.ಹೊಸ ಯೋಜನೆಯಿಂದ ನದಿ ನೀರಿನ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಅಂತಾ ಮೋದಿ ಹೇಳಿದ್ರು.
8 ವರ್ಷಗಳಲ್ಲಿ ಕರ್ನಾಟಕಕ್ಕೆ 70 ಸಾವಿರ ಕೋಟಿಯ ಹೈವೇ ಸಿಕ್ಕಿದೆ. ಮಂಗಳೂರು-ಚೆನ್ನೈ ಎಕ್ಸ್ಪ್ರೇಸ್ ವೇ ಆಗ್ತಿದೆ. ಬೆಂಗಳೂರು-ಮೈಸೂರು ಹೈವೇ ಯೋಜನೆ ಆಗ್ತಿದೆ. ರೈಲ್ವೆ ವಿಭಾಗದಲ್ಲಿ 4 ಪಟ್ಟು ಹೆಚ್ಚಳವಾಗಿದೆ. ರೈಲ್ವೆ ಮಾರ್ಗಗಳ ಅಗಲೀಕರಣ ಹೆಚ್ಚಾಗಿದೆ ಎಂದು ಹೇಳಿದರು.