ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ರಾಜ್ಯದ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿಕೆ ಮಾಡಿದೆ.
ಮೇಲ್ಮನವಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ ಎಂದು ವರದಿಯಾಗಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿರುವ ಸುಪ್ರೀಂಕೋರ್ಟ್ ವಿಚಾರಣೆ ಮುಂದೂಡುವಂತೆ ಕೋರುವ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದಿದೆ.