Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪತ್ತೆ-ಪೊಲೀಸರಿಗೊಪ್ಪಿಸಿದ ಸ್ಥಳೀಯರು
    ಇತ್ತೀಚಿನ ಸುದ್ದಿ

    ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪತ್ತೆ-ಪೊಲೀಸರಿಗೊಪ್ಪಿಸಿದ ಸ್ಥಳೀಯರು

    September 16, 2022
    Share

    ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ.

    ಉಡುಪಿಯ ಕಟಪಾಡಿಯಲ್ಲಿ ವಾಸ್ತವ್ಯವಿರುವ ಉತ್ತರ ಪ್ರದೇಶ ಮೂಲದ ಯುವಕ ಫಯಿಮ್ ಎಂಬಾತ ಕಟಪಾಡಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸಕ್ಕಿದ್ದು ತನ್ನ ಮಿತ್ರ ಗುಲ್ಫಾಮ್ ಎಂಬವರ ರೂಮ್‌ಗೆ ಬಂದಿದ್ದ. ಆ ಸಂದರ್ಭ ಕೊಲಕಾಡಿ ಮೂಲದ ಯುವತಿ ಜೊತೆ ಮಾತನಾಡುತ್ತಾ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಸ್ಥಳೀಯರಿಗೆ ಸಂಶಯ ಬಂದು ವಿಚಾರಿಸಿದ್ದು, ಕೂಡಲೇ ಯುವತಿ ಸ್ಥಳದಿಂದ ಪರಾರಿಯಾಗಿದ್ದಾಳೆ.

    ಈ ಸಂದರ್ಭ ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದ್ದು ಸ್ಥಳೀಯರು ಆರೋಪಿಗಳಿಗೆ ಗೂಸಾ ಇಕ್ಕಿದ್ದಾರೆ. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಇನ್ನು ಆರೋಪಿ ಫಯೀಮ್ ಕಡಪಾಡಿಯಲ್ಲಿ ನೆಲೆಸಿದ್ದು ಇಬ್ಬರು ಮಕ್ಕಳ ತಂದೆಯಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಈತ ಕಾರ್ನಾಡುವಿನಲ್ಲಿ ಸೆಲೂನ್ ಅಂಗಡಿ ನಡೆಸುತ್ತಿದ್ದು ಬದಿಯಲ್ಲಿದ್ದ ಫ್ಯಾನ್ಸಿ ಸೆಂಟರ್ ನಲ್ಲಿ ಇದೇ ಯುವತಿ ಕೆಲಸ ಮಾಡುತ್ತಿರುವಾಗ ಸ್ನೇಹ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಈ ಘಟನೆಯಿಂದ ಮುಲ್ಕಿ ಪರಿಸರ ಬೂದಿ ಮುಚ್ಚಿದ ಕೆಂಡದಂತಿದ್ದು ಠಾಣೆಯ ಹೊರಬದಿಯಲ್ಲಿ ಸಂಘಟನೆಯ ನಾಯಕರು ಸೇರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    Post Views: 258

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.