Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜೀಪ್‌, ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸವಾರ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಜೀಪ್‌, ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸವಾರ ಮೃತ್ಯು

    December 16, 2024
    Share

    ಉಳ್ಳಾಲ: ಜಿಲ್ಲೆಯ ಉಳ್ಳಾಲ ಹತ್ತಿರದ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ಬಳಿಯ ಸರ್ವೀಸ್‌ ರಸ್ತೆಯಲ್ಲಿ ಅತೀ ವೇಗದಲ್ಲಿ ಆಗಮಿಸಿದ ಜೀಪ್‌, ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ್ದಾರೆ. ಸಹ ಸವಾರೆ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಸಂಪಿಗೆದಡಿ ನಿವಾಸಿ ಅರುಣ್‌ ಕುಮಾರ್‌ (43) ಮೃತಪಟ್ಟವರು ಎಂದು ತಿಳಿಯಲಾಗಿದೆ.

    ಸ್ಕೂಟರ್‌ನ ಹಿಂಬದಿಯಲ್ಲಿದ್ದ ರಾಣಿಪುರ ನಿವಾಸಿ ಹೇಮಾವತಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಅರುಣ್‌ ಅವರು ತೊಕ್ಕೊಟ್ಟು ಕಾಪಿಕಾಡಿನ ವೈನ್‌ ಆ್ಯಂಡ್‌ ಡೈನ್‌ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನಲ್ಲಿ ವೈಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದು, ಶನಿವಾರ ರಾತ್ರಿ ಕೆಲಸ ಮುಗಿಸಿ ತನ್ನ ಸ್ಕೂಟರ್‌ನಲ್ಲಿ ಬಾರ್‌ನ ಸ್ವಚ್ಛತಾ ಸಿಬಂದಿ ರಾಣಿಪುರ ನಿವಾಸಿ ಹೇಮಾವತಿಯವರನ್ನು ಕುಳ್ಳಿರಿಸಿಕೊಂಡು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ಮನೆಗೆ ಹಿಂದಿರುಗುವಾಗ ಜೀಪ್‌ ಮುಖಾಮುಖೀ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್‌ ಸವಾರ ಅರುಣ್‌ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

    ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಜೀಪ್‌ ಚಾಲಕ ಉಳ್ಳಾಲಬೈಲ್‌ ನಿವಾಸಿ ಶಶಾಂಕ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

     ಅರುಣ್‌ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮನೆಗೆ ಇವರೊಬ್ಬರೇ ಆಧಾರಸ್ಥಂಭವಾಗಿದ್ದು, ತಂದೆ, ತಾಯಿ ಅನಾರೋಗ್ಯದಲ್ಲಿದ್ದು, ಇವರೇ ಆರೈಕೆ ಮಾಡುತ್ತಿದ್ದರು ಎನ್ನಲಾಗಿದೆ.

    Post Views: 265

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.