Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉದ್ಯಮಿಗೆ ಹನಿಟ್ರ್ಯಾಪ್; ಪತ್ನಿಯನ್ನು ವಿಧವೆ ಎಂದು ಪರಿಚಯಿಸಿದ್ದ ಪತಿ ಮಹಾಶಯ; ದಂಪತಿ ಸೇರಿ ನಾಲ್ವರು ಅರೆಸ್ಟ್
    ಇತ್ತೀಚಿನ ಸುದ್ದಿ

    ಉದ್ಯಮಿಗೆ ಹನಿಟ್ರ್ಯಾಪ್; ಪತ್ನಿಯನ್ನು ವಿಧವೆ ಎಂದು ಪರಿಚಯಿಸಿದ್ದ ಪತಿ ಮಹಾಶಯ; ದಂಪತಿ ಸೇರಿ ನಾಲ್ವರು ಅರೆಸ್ಟ್

    December 16, 2023
    Share

    ಬೆಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಉದ್ಯಮಿ ಅತಿವುಲ್ಲಾ ಎಂಬುವವರನ್ನು ಹನಿಟ್ರ್ಯಾಪ್ ಮಾಡಿ ಆರೋಪಿಗಳು ಹಣ ದೋಚಿದ್ದರು. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

    ಬಂಧಿತರನ್ನು ಖಲೀಮ್, ಸಭಾ, ಓಬೆದ್ ರಕಿಂ, ಅತೀಕ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ಖಲೀಮ್ ಹಾಗೂ ಸಭಾ ಇಬ್ಬರೂ ಗಂಡ-ಹೆಂಡತಿ. ಪತ್ನಿ ಸಭಾಳನ್ನು ವಿಧವೆ ಎಂದು ಉದ್ಯಮಿಗೆ ಪರಿಚಯ ಮಾಡಿಸಿಕೊಟ್ಟಿದ್ದ. ಬಳಿಕ ಆರ್.ಅರ್.ನಗರದಲ್ಲಿ ರೂಮ್ ಬುಕ್ ಮಾಡಲು ಉದ್ಯಮಿಯನ್ನು ಸಭಾ ಕರೆದಿದ್ದಳು. ಆಧಾರ್ ಕಾರ್ಡ್ ಜೊತೆ ಬರುವಂತೆ ಅತಿವುಲ್ಲಾಗೆ ತಿಳಿಸಿದ್ದಳು. ರೂಮ್ ಬುಕ್ ಮಾಡಿದ ಕೆಲ ಹೊತ್ತಲ್ಲೇ ಇತರ ಆರೋಪಿಗಳು ಎಂಟ್ರಿ ಕೊಟ್ಟಿದ್ದರು.

    ಏಕಾಏಕಿ ಎಂಟ್ರಿಕೊಟ್ಟು ಸೀನ್ ಕ್ರಿಯೇಟ್ ಮಾಡಿ ಈ ವಿಚಾರ ನಿಮ್ಮ ಮನೆಯವರಿಗೆ ಹೇಳ್ತೀವಿ ಎಂದು 6 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದೇ ವೇಳೆ ಮಾಹಿತಿ ಪಡೆದು ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ವೇಳೆ ರೆಡ್ ಹ್ಯಾಂಡ್ ಆಗಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

    Post Views: 285

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.