Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೇ 2ರ ತನಕ ಬಿಸಿಗಾಳಿ ಬೀಸಲಿದೆ..! ಹವಾಮಾನ ಇಲಾಖೆಯ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮೇ 2ರ ತನಕ ಬಿಸಿಗಾಳಿ ಬೀಸಲಿದೆ..! ಹವಾಮಾನ ಇಲಾಖೆಯ ಎಚ್ಚರಿಕೆ

    April 30, 2024
    Share

    ಮಂಗಳೂರು: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ (heat wave)  ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ

    ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ ವಾತಾವರಣ ಮುಂದುವರಿಯಲಿದೆ. ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
    ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಮಾತ್ರ ಎಪ್ರಿಲ್‌ನಲ್ಲಿ ಒಂದೆರಡು ಸಾರಿ ಮಳೆ ಸುರಿದಿದೆ. ಕೆಲವು ಪ್ರದೇಶಗಳಲ್ಲಿ ಕಳೆದ ನವೆಂಬರ್‌ನಲ್ಲಿ ಕಾಣೆಯಾದ ಮಳೆ ಮತ್ತೆ ಕಾಣಿಸಿಕೊಂಡಿಲ್ಲ. ಹೀಗಾಗಿ ವಾತಾವರಣ ಬಿಸಿಯಾಗಿಯೇ ಇದೆ. ಮಾರ್ಚ್ ಆರಂಭದಿಂದಲೇ ಬಿಸಿಲ ಝಲ ತೀವ್ರಗೊಂಡಿತ್ತು. ಸೆಖೆಯಿಂದಾಗಿ ಹಿರಿಯ ನಾಗರಿಕರು ತೀವ್ರ ಸಮಸ್ಯೆ ಎದುರಿ ಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಮತ ಚಲಾಯಿಸಲು ಆಗಮಿಸಿದ ಹಿರಿಯ ನಾಗರಿಕರು ಕಷ್ಟ ಅನುಭವಿಸಿದ್ದರು. ಮಂಗಳೂರಿನಲ್ಲಿ ಸೋಮವಾರ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇತ್ತು. ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಮುಂದಿನ 4 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಅತಿಯಾದ ತಾಪಮಾನದಿಂದ ಸಮಸ್ಯೆ ಎದುರಿಸಿದವರು ಇನ್ನೂ ಕೆಲವು ದಿನಗಳ ಕಾಲ ನ ಸಮಸ್ಯೆ ಎದುರಿಸುವಂತಾಗಿದೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.