Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮನೆಗಳ್ಳತನ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆಗಳ್ಳತನ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

    July 19, 2023
    Share

    ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೊಂಡಂತಿಲ ಗ್ರಾಮದ ತಾರಿಗುಡ್ಡ ಸೈಟ್ ಮನೆಯ ಮುಹಮ್ಮದ್ ಶರೀಫ್ (40) ಬಂಧಿತ ಆರೋಪಿ. 2023ರ ಜನವರಿ 15ರಂದು ಸಂಜೆ 6:30ರಿಂದ 16ರ ಬೆಳಗ್ಗೆ 9ರ ಮಧ್ಯೆ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯ ಎದುರಿನ ಬಾಗಿಲಿನ ಲಾಕನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈ ದಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು. ತನಿಖೆ ಕೈಗೊಂಡ ಸಿಸಿಬಿ ಎಸಿಪಿ ಪಿಎ ಹೆಗಡೆ ನೇತೃತ್ವದ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ 56,50,000 ರೂ, ಚಿನ್ನಾಭರಣಗಳು, ಮೊಬೈಲ್ ಫೋನ್ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣದ ಆರೋಪಿಗಳಿಗೆ ಮನೆಯನ್ನು ತೋರಿಸಿಕೊಟ್ಟ ಆರೋಪಿ ಮುಹಮ್ಮದ್ ಶರೀಫ್‌ನನ್ನು ಬಂಧಿಸಿ ಆತನಿಂದ ಚಿನ್ನದ ಪೆಂಡೆಂಟ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಮಂದಿ ಆರೋಪಿಗಳು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 164

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.