Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮನೆ ಕಳ್ಳತನ ಪ್ರಕರಣ: ಆರೋಪಿಯ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶ
    ಇತ್ತೀಚಿನ ಸುದ್ದಿ

    ಮನೆ ಕಳ್ಳತನ ಪ್ರಕರಣ: ಆರೋಪಿಯ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶ

    April 4, 2026
    Share

    ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.

    ಮಾರ್ಚ್ 6, 2026 ರಂದು ಸಂಜೆ 7:45ರಿಂದ ರಾತ್ರಿ 10:15ರ ನಡುವೆ, ಹೇರಾಡಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಪ್ರದೇಶದ ನಿವಾಸಿ 77 ವರ್ಷದ ಮಂಜುನಾಥ ರಾವ್ ಅವರು ತಮ್ಮ ಪತ್ನಿಯೊಂದಿಗೆ ಮನೆಗೆ ಬೀಗ ಹಾಕಿ ಬಾರಕೂರಿನಲ್ಲಿ ನಡೆಯುತ್ತಿದ್ದ ನಾಗಮಂಡಲ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಅಪರಿಚಿತರು ಮನೆಯ ಮುಂದಿನ ಬಾಗಿಲು ಒಡೆದು ಒಳನುಗ್ಗಿ, ಬೆಡ್ ರೂಮ್‌ನಲ್ಲಿದ್ದ ಗೋಡ್ರೇಜ್ ಅಲಮಾರಿಯನ್ನು ಒಡೆದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿಕೊಂಡಿದ್ದರು.

    ಕಳುವಾದ ವಸ್ತುಗಳಲ್ಲಿ ಸುಮಾರು 47 ಗ್ರಾಂ ಚಿನ್ನದ ಸರ-ಪೆಂಡೆಂಟ್, 32 ಗ್ರಾಂ ಬಳೆಗಳು, 6 ಗ್ರಾಂ ಬೆಂಡೋಲೆ, 4 ಗ್ರಾಂ ಉಂಗುರ, 3 ಗ್ರಾಂ ಬೆಂಡೋಲೆ, 250 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ₹49,000 ನಗದು ಸೇರಿದ್ದು, ಒಟ್ಟು ಮೌಲ್ಯ ₹14,67,000 ಆಗಿದೆ.

    ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಅಪರಾಧ ಸಂಖ್ಯೆ 45/2026ರಂತೆ BNS ಕಲಂ 334(4), 305 ಅಡಿ ಪ್ರಕರಣ ದಾಖಲಾಗಿತ್ತು.

    ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಸಿ.ಪಿ.ಐ ಗೋಪಿಕೃಷ್ಣ ಹಾಗೂ ಪಿ.ಎಸ್‌.ಐ ಅಶೋಕ್ ಮಾಳಾಬಗಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಆರೋಪಿ ಪ್ರವೀಣ್ ಕುಮಾರ್ ಕೆ (ಬಾರಕೂರು ನಿವಾಸಿ) ಅವರನ್ನು ಬಂಧಿಸಿದೆ. ಆರೋಪಿಯಿಂದ ₹14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ₹7,500 ನಗದು ವಶಪಡಿಸಿಕೊಳ್ಳಲಾಗಿದೆ.

    ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Post Views: 103

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.