ಬೆಂಗಳೂರು : ಪತಿಯಿಂದ ದೂರವಾಗುವ ಪತ್ನಿಗೆ ಜೀವನಾಂಶದ ಜೊತೆಗೆ ವಸತಿ ವ್ಯವಸ್ಥೆ ಮಾಡಿಕೊಳ್ಳಲು 5 ಸಾವಿರ ರೂ. ಪಾವತಿಸುವಂತೆ ಪತಿಗೆ ಹೈಕೋರ್ಟ್ ಆದೇಶಿಸಿದೆ.
ಬೀದರ್ ಜಿಲ್ಲೆಯ ಸುನಿಲ್ ಕುಮಾರ್,ಮೊದಲನೇ ಪತ್ನಿ ಹಾಗೂ ಕುಟುಂಬದವರು ಸಲ್ಲಿಸಿದ್ದ ಕ್ರಿಮಿನಲ್ ಮರುಉ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಪ್ರಕರಣದಲ್ಲಿ ಅರ್ಜಿದಾರ ತನ್ನ ಮೊದಲನೇ ಪತ್ನಿ ಹಾಗೂ ಕುಟುಂಬ ಸದಸ್ಯರೊಂದಿಗೆ ಎಲಿಜಬತ್ ಎಂಬಾಕೆಯನ್ನು ಮದುವೆಯಾಗಿದ್ದು, ಸದ್ಯ ಆಕೆಯಿಂದ ದೂರವಾಗಿದ್ದಾರೆ. ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯ್ದೆಯಡಿ ಎಲಿಜಿಬತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಚಾರಣಾ ನ್ಯಾಯಾಲಯ, 6 ಸಾವಿರ ರೂ. ಜೀವನಾಂಶ ಪಾವತಿಸಲು ಪತ್ನಿಗೆ ಆದೇಶಿಸಿದೆ. ಜೊತೆಗೆ ಪತ್ನಿಯು ಪ್ರತ್ಯೇಕ ಸ್ಥಳದಲ್ಲಿ ವಾಸಿಸಲು ಆಕೆಗೆ ಮಾಸಿಕ 5 ಸಾವಿರ ರೂ. ಪಾವತಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.