Facebook Twitter Instagram
    Sunday, May 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ನೀರು ಕೇಳಿ ಬಂದ ಸಾಧು ಮಾಡಿದ್ದೇನು? ಖತರ್ನಾಕ್ ಗ್ಯಾಂಗ್ ಹೇಗೆ ನಿಮ್ಮನ್ನು ಯಾಮಾರಿಸುತ್ತೆ ಗೊತ್ತಾ?
    ರಾಜ್ಯ ಸುದ್ದಿ

    ನೀರು ಕೇಳಿ ಬಂದ ಸಾಧು ಮಾಡಿದ್ದೇನು? ಖತರ್ನಾಕ್ ಗ್ಯಾಂಗ್ ಹೇಗೆ ನಿಮ್ಮನ್ನು ಯಾಮಾರಿಸುತ್ತೆ ಗೊತ್ತಾ?

    May 16, 2026
    Share

    ರಾಯಚೂರು: ಕಾವಿ ಬಟ್ಟೆ ಹಾಕಿಕೊಂಡು, ಸಾಧು ಸಂತರಂತೆ ಬಂದು ನಿಮ್ಮನ್ನ ಹಾಡಿ ಹೊಗಳುವವರನ್ನು ನಂಬುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ರಾಯಚೂರಿನ ಸಿಂಧನೂರು ನಗರದಲ್ಲಿ ನಡೆದ ಘಟನೆಯೇ ಸಾಕ್ಷಿ. ನಗರದಲ್ಲಿ ಸಾಧು ಸಂತರ ಸೋಗಿನಲ್ಲಿ ಬಂದು, ಹೂವುಗಳನ್ನು ನೀಡಿ, ಸಮ್ಮೋಹನ ಮಾಡುವ ಮೂಲಕ ಸಾರ್ವಜನಿಕರ ಹಣ ಮತ್ತು ಚಿನ್ನಾಭರಣಗಳನ್ನು ದೋಚುತ್ತಿರುವ ಖದೀಮರ ಕೃತ್ಯ ಈಗ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಸಿಕ್ಕಿದೆ. ಧರ್ಮ, ಭಕ್ತಿ ಮತ್ತು ಸತ್ಕಾರದ ಹೆಸರಿನಲ್ಲಿ ಜನರನ್ನು ಮಂಕುಬೂದಿ ಎರಚಿ ಲೂಟಿ ಮಾಡುವ ‘ಖದೀಮ ಸಾಧುಗಳ’ ಗ್ಯಾಂಗ್ ಈಗ ಜಿಲ್ಲೆಯಲ್ಲಿ ತೀವ್ರ ಆತಂಕ ಮೂಡಿಸಿದೆ.

    ಸತ್ಕಾರ ಮಾಡಿದ್ದಕ್ಕೆ ಸಿಕ್ಕಿದ್ದೇನು?

    ಸಿಂಧನೂರು ನಗರದ ಪ್ರಮುಖ ರಸ್ತೆಯಲ್ಲಿರುವ ‘ಸಾಯಿ ಮೆಡಿಕಲ್ಸ್’ ಫಾರ್ಮಸಿಗೆ ಸಾಧುವೊಬ್ಬರು ಆಗಮಿಸಿದ್ದರು. ಬಿಸಿಲಿನ ಬೇಗೆಯಿಂದ ಬಳಲಿದ್ದ ಆ ಸಾಧು, ಕುಡಿಯಲು ನೀರು ಕೇಳಿದ್ದಾರೆ. ಮೆಡಿಕಲ್ ಅಂಗಡಿಯ ಮಾಲೀಕರಾದ ವಿಷ್ಣುದತ್ತು ಮಾನವೀಯತೆ ಮತ್ತು ಸಾಧುಗಳ ಮೇಲಿನ ಭಕ್ತಿಯಿಂದ ತಕ್ಷಣವೇ ಫ್ರಿಡ್ಜ್‌ನಿಂದ ತಣ್ಣನೆಯ ನೀರನ್ನು ತಂದುಕೊಟ್ಟು ಸತ್ಕರಿಸಿದ್ದಾರೆ. ನೀರು ಕುಡಿದ ಸಾಧು, ಮಾಲೀಕರ ಭಕ್ತಿಗೆ ಮೆಚ್ಚುಗೆ ಸೂಚಿಸುವಂತೆ ನಟಿಸಿದ್ದಾನೆ. ನಿನಗೆ ಮತ್ತು ನಿನ್ನ ಮಕ್ಕಳಿಗೆ ಒಳಿತಾಗಲಿದೆ. ನಿಮ್ಮ ಸಂಕಷ್ಟಗಳೆಲ್ಲವೂ ದೂರಾಗಲಿವೆ ಎಂದು ಹರಸುತ್ತಾ ತನ್ನ ಕೈಯಲ್ಲಿದ್ದ ಎರಡು ಹೂವುಗಳನ್ನು ವಿಷ್ಣುದತ್ತು ಅವರ ಕೈಗೆ ನೀಡಿದ್ದಾನೆ.

    ಹೂವು ಮೂಸುತ್ತಿದ್ದಂತೆ ಏನಾಯ್ತು?

    ಸಾಧು ನೀಡಿದ ಆ ಎರಡು ಹೂವುಗಳ ವಾಸನೆ ತಗುಲಿದ ಕೆಲವೇ ಕ್ಷಣಗಳಲ್ಲಿ ಮಾಲೀಕ ಪ್ರಜ್ಞೆ ತಪ್ಪಿದವರಂತೆ, ಮಂಕು ಬಡಿದ ಸ್ಥಿತಿಗೆ ತಲುಪಿದ್ದಾರೆ. ತಮಗೆ ಅರಿವಿಲ್ಲದಂತೆಯೇ ಸಮ್ಮೋಹನಕ್ಕೆ ಒಳಗಾದ ಮಾಲೀಕರು, ಖುದ್ದು ತಾವೇ ತಮ್ಮ ಜೇಬಿನಲ್ಲಿದ್ದ 10 ಸಾವಿರ ರೂಪಾಯಿ ನಗದು ಹಣ ಮತ್ತು ಕೈಯಲ್ಲಿದ್ದ ಬೆಲೆಬಾಳುವ ಬಂಗಾರದ ಉಂಗುರವನ್ನು ಬಿಚ್ಚಿ ಆ ಖದೀಮ ಸಾಧುವಿನ ಕೈಗೆ ಕೊಟ್ಟಿದ್ದಾರೆ. ಹಣ ಮತ್ತು ಚಿನ್ನವನ್ನು ಲೂಟಿ ಮಾಡಿದ ಆ ಸಾಧು, ಅಲ್ಲಿಂದ ಕ್ಷಣಾರ್ಧದಲ್ಲಿ ಕಾಲ್ಕಿತ್ತಿದ್ದಾನೆ. ಕೆಲ ಹೊತ್ತಿನ ಬಳಿಕ ವಿಷ್ಣುದತ್ತು ಅವರು ಸಂಪೂರ್ಣ ಪ್ರಜ್ಞಾವಸ್ಥೆಗೆ ಬಂದಾಗ ತಮಗೆ ವಂಚನೆಯಾಗಿರುವುದು ಅರಿವಾಗಿದೆ.

    ಸಿಸಿಟಿವಿಯಲ್ಲಿ ಸೆರೆಯಾಯ್ತು ಖದೀಮರ ಜಾಲ

    ಈ ವಿಚಿತ್ರ ಲೂಟಿ ಪ್ರಕರಣದ ಕುರಿತು ಸಿಂಧನೂರು ಟೌನ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಾಗಿದೆ. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಸಾಯಿ ಮೆಡಿಕಲ್ಸ್ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಸಾಧುಗಳ ಸೋಗಿನಲ್ಲಿರುವ ಖದೀಮರ ಇಡೀ ತಂಡ ನಗರದಾದ್ಯಂತ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಪತ್ತೆಯಾಗಿದೆ. ಈ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

    Post Views: 19

    karnataka PoliceInvestigation

    Related Posts

    ಟಯರ್ ಬ್ಲಾಸ್ಟ್‌ನಿಂದ ಸಂಭವಿಸಿದ ಕಾರು ಅಪಘಾತ; ಮೂವರಿಗೆ ಗಾಯ

    May 17, 2026

    ತೆರೆದ ಕೊಳವೆಬಾವಿಗೆ ಬಿದ್ದ ಬಾಲಕ: 9 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    May 17, 2026

    ಪೊಲೀಸ್ ಸಿಬ್ಬಂದಿಯ ಮನೆಯಲ್ಲೇ ಕಳ್ಳತನ: ಲಕ್ಷಾಂತರ ಮೌಲ್ಯದ ಆಭರಣ ಕಳವು

    May 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.