Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿದ್ಯಾರ್ಥಿಗೆ ಹಲ್ಲೆ – ಮೂವರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ವಿದ್ಯಾರ್ಥಿಗೆ ಹಲ್ಲೆ – ಮೂವರು ಅರೆಸ್ಟ್

    November 27, 2022
    Share

    ಮಂಗಳೂರು: ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

    ಮುತ್ತು(18), ಪ್ರಕಾಶ್‌(21) ಮತ್ತು ರಾಕೇಶ್‌(23) ಎಂಬವರು ಬಂಧಿತ (Arrest) ಆರೋಪಿಗಳಾಗಿದ್ದಾರೆ.

    ಕಾರ್ಕಳದ ಖಾಸಗಿ ಕಾಲೇಜು ವಿದ್ಯಾರ್ಥಿ ಸೈಯದ್ ರಶೀಮ್ ಉಮರ್(20) ಎಂಬವರ ಮೇಲೆ ನ.24ರಂದು ಬಸ್ಸಿನಲ್ಲಿ ಹಲ್ಲೆ ನಡೆದಿತ್ತು. ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸೈಯದ್ ರಶೀಮ್ ಉಮರ್‌ಗೆ ಅಂದು ಸಂಜೆ ನಗರದ ನಂತೂರು ಜಂಕ್ಷನ್ ಬಳಿ ತಂಡವೊಂದು ಹಲ್ಲೆ ನಡೆಸಿತ್ತು. ಬಸ್ಸಿನೊಳಗೆ ನುಗ್ಗಿದ ತಂಡ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿರುವುದಾಗಿ ರಶೀಮ್ ಉಮರ್ ಕದ್ರಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದರು.

     ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಲ್ಲದೆ ಬಸ್ಸಿನಿಂದ ಕೆಳಗೆ ಇಳಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಕೆಯೊಡ್ಡಿದೆ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ಆರೋಪಿಸಿದ್ದರು.

    ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಕದ್ರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    Post Views: 173

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.