Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಹನ ಸವಾರರೇ ಫೆ.17 ರೊಳಗೆ ʻHSRPʼ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್..!‌
    ಇತ್ತೀಚಿನ ಸುದ್ದಿ

    ವಾಹನ ಸವಾರರೇ ಫೆ.17 ರೊಳಗೆ ʻHSRPʼ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್..!‌

    February 11, 2024
    Share

    ಬೆಂಗಳೂರು : ವಾಹನ ಸವಾರರುಫೆಬ್ರವರಿ 17 ರೊಳಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.

    2019 ಏಪ್ರಿಲ್ 1ಕ್ಕಿಂತ ಹಳೆಯದಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್-HSRP ಹಾಕಿಸಿಕೊಳ್ಳುವಂತೆ ಸಾರಿಗೆ ಇಲಾಖೆ ನೀಡಿರುವ ಗಡುವು ಫೆ.17ಕ್ಕೆ ಮುಕ್ತಾಯವಾಗಲಿದೆ.

    ನಂಬರ್ ಪ್ಲೆಟ್ ಬದಲಾವಣೆಗೆ ಹಲವು ವಾಹನ ಮಾಲೀಕರು ಆಸಕ್ತಿ ತೋರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಸಿ ಮುಟ್ಟಿಸಲು ಇಲಾಖೆ ಮುಂದಾಗಿದೆ.

    ವಾಹನಗಳಿಗೆ ಹೆಚ್ ಎಸ್ ಆರ್ ಪಿ ಅಳವಡಿಸದೇ ಮೊದಲ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿ ದಂಡ, 2ನೇ ಬಾರಿ ಸಿಕ್ಕಿ ಬಿದ್ದರೆ 2000 ರೂಪಾಯಿ ದಂಡ ಹಾಕಲಾಗುತ್ತದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ.

    ಹೆಚ್.ಎಸ್.ಆರ್.ಪಿಅಳವಡಿಕೆಯಕಾರ್ಯವಿಧಾನ

    https://transport.karnataka.gov.in ಅಥವಾsiam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.

    ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.

    ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.

    HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.

    HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

    ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.

    ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.

    ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.

    ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

    Post Views: 240

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.