Facebook Twitter Instagram
    Thursday, October 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ -ಯುವಕ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ -ಯುವಕ ಅರೆಸ್ಟ್

    October 1, 2026
    Share

    ಮಂಗಳೂರು: ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯ ಸಂದರ್ಭದಲ್ಲಿ ನಕಲಿ ಕರೆಪತ್ರ (ಹಾಲ್ ಟಿಕೆಟ್) ಹಾಗೂ ದಾಖಲೆಗಳನ್ನು ಸೃಷ್ಟಿಸಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಯಜೇಶ್ ಬಿ.ಜೆ. ರೈ ಎಂಬುವವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾರುಪಡಿಸಲಾಗಿದೆ.


    ಘಟನೆಯ ವಿವರ: ದಿನಾಂಕ 28/09/2026ರಂದು ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ಕಾನ್‌ಸ್ಟೇಬಲ್‌ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ವೇಳೆ ಅರ್ಹ ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆಯಲ್ಲಿ ಸಿ.ಪಿ.ಸಿ.-5225446 ಸಂಖ್ಯೆಯ ಆನ್‌ಲೈನ್ ಹಾಲ್ ಟಿಕೆಟ್‌ನೊಂದಿಗೆ ಕಡಬ ತಾಲೂಕಿನ ಬೆದ್ರಾಜೆ ಮನೆಯ ಯಜೇಶ್ ಬಿ.ಜೆ. ರೈ (22 ವರ್ಷ) ಎಂಬ ಅಭ್ಯರ್ಥಿ ಪರೀಕ್ಷಾ ಕರೆಪತ್ರವನ್ನು ಹಾಜರುಪಡಿಸಿದ್ದರು.


    ನಕಲಿ ದಾಖಲೆ ಬಯಲು: ನೋಂದಣಿ ಡೆಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದ ಸಿಪಿಸಿ-446 ಮಹಾದೇವ್ ಮತ್ತು ಎಚ್‌ಸಿ-46 ಪೂರ್ಣೇಶ್
    ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒದಗಿಸಿದ ತಂತ್ರಾಂಶದಲ್ಲಿ ಪರಿಶೀಲಿಸಿದಾಗ, ಸದರಿ ಅಭ್ಯರ್ಥಿಯ ವಿವರಗಳು ಪಟ್ಟಿಯಲ್ಲಿ ಕಂಡುಬಂದಿಲ್ಲ. ಅಲ್ಲದೆ, ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿಯ 1:5 ಅರ್ಹತಾ ಪಟ್ಟಿಯಲ್ಲಿಯೂ ಅಭ್ಯರ್ಥಿಯ ಹೆಸರು ಅಥವಾ ಅರ್ಜಿ ಸಂಖ್ಯೆ ಲಭ್ಯವಿರಲಿಲ್ಲ. ಪರಿಣಾಮವಾಗಿ, ಅವರಿಗೆ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಯಿತು. ಅಭ್ಯರ್ಥಿ ಹಾಜರುಪಡಿಸಿದ ದಾಖಲೆಗಳು ಮೇಲ್ನೋಟಕ್ಕೆ ನಕಲಿ ಎಂಬುದು ದೃಢಪಟ್ಟಿತ್ತು.


    ಕಡಬದಲ್ಲಿ ಮಹಜರು ಮತ್ತು ತನಿಖೆ ಮುಂದುವರಿಕೆ: ಈ ನಕಲಿ ಹಾಲ್ ಟಿಕೆಟ್ ಪ್ರಿಂಟ್ ಪಡೆದುಕೊಂಡಿದ್ದ ಮೂಲವನ್ನು
    ಪತ್ತೆಹಚ್ಚುವ ನಿಟ್ಟಿನಲ್ಲಿ ಬರ್ಕೆ ಪೊಲೀಸ್ ಠಾಣೆಯ ತನಿಖಾ ತಂಡವು ಕಡಬಕ್ಕೆ ಆಗಮಿಸಿ, ಸ್ಥಳೀಯ ಜೆರಾಕ್ಸ್/ಸೈಬರ್ ಅಂಗಡಿಯೊಂದಕ್ಕೆ ಭೇಟಿ ನೀಡಿ ಮಹತ್ವದ ಮಹಜರು ಹಾಗೂ ಪರಿಶೀಲನೆ ನಡೆಸಿದೆ. ಪ್ರಸ್ತುತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾರುಪಡಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.


    ಈ ಕುರಿತು ಜಿಲ್ಲಾ ಪೊಲೀಸ್ ಕಚೇರಿಯ ಸಹಾಯಕ ಆಡಳಿತಾಧಿಕಾರಿ ಪ್ರಕಾಶ್ ರುದ್ರಪ್ಪ ಹೂವಿನ ಅವರು ನೀಡಿದ ದೂರಿನ ಮೇರೆಗೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 336(1), 336(3), 318(4) ಅಡಿಯಲ್ಲಿ ಕ್ರೆಮಿನಲ್ ಪ್ರಕರಣ ದಾಖಲಿಸಲಾಗಿದೆ.

    Post Views: 6

    Related Posts

    MRPL ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ (KCDA ) ಇದರ 68ನೇ ವಾರ್ಷಿಕ ಮಹಾಸಭೆ

    October 1, 2026

    ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ: 2,300 ವಿದ್ಯಾರ್ಥಿಗಳಿಗೆ ಪದವಿ

    October 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MRPL ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ (KCDA ) ಇದರ 68ನೇ ವಾರ್ಷಿಕ ಮಹಾಸಭೆ

    October 1, 2026

    ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ: 2,300 ವಿದ್ಯಾರ್ಥಿಗಳಿಗೆ ಪದವಿ

    October 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.