Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು
    ಇತ್ತೀಚಿನ ಸುದ್ದಿ

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026
    Share

    ಕುಂದಾಪುರ: ಖಾಸಗಿ ಬಸ್ಸೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್, ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕುಂದಾಪುರ-ಶಿವಮೊಗ್ಗ ರಾಜ್ಯ ಹೆದ್ದಾರಿ 52ರ ಹುಲಿಕಲ್ ಘಾಟ್‌ನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.ಹುಲಿಕಲ್ ಘಾಟ್‌ನಲ್ಲಿ ಭೂಕುಸಿತದ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಗರದಿಂದ ಬಂದಿದ್ದ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ಇಳಿಸಲಾಗಿತ್ತು. ಬಳಿಕ, ಬಾಳೆಬರೆ ಘಾಟ್ ಮೂಲಕ ಉಡುಪಿಗೆ ತೆರಳುತ್ತಿದ್ದ ಮತ್ತೊಂದು ಬಸ್, ತನ್ನ ಪ್ರಯಾಣ ಆರಂಭಿಸಿದ ಕೇವಲ 300 ಮೀಟರ್ ಅಂತರದಲ್ಲಿ ಬೆಂಕಿಗೆ ಆಹುತಿಯಾಗಿದೆ. ಈ ಬಸ್‌ನಲ್ಲಿ 17 ಮಂದಿ ಪ್ರಯಾಣಿಕರಿದ್ದರು.ಬಸ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ತಕ್ಷಣ ಚಾಲಕ ಮತ್ತು ನಿರ್ವಾಹಕರು ಸಮಯಪ್ರಜ್ಞೆ ಮೆರೆದಿದ್ದಾರೆ. ತಕ್ಷಣವೇ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಪ್ರಯಾಣಿಕರು ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬಸ್‌ನಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ಬಸ್ ಬೆಂಕಿಗಾಹುತಿಯಾಗಿದೆ.ಈ ಘಟನೆಯಿಂದಾಗಿ ಘಾಟ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಸ್ಥಳೀಯರ ಸಹಾಯದಿಂದ ಪೊಲೀಸರು ರಸ್ತೆಯಲ್ಲಿದ್ದ ವಾಹನಗಳನ್ನು ತೆರವುಗೊಳಿಸಿ, ಸಂಚಾರ ಸುಗಮಗೊಳಿಸಿದರು.

    Post Views: 2

    karnataka PoliceInvestigation

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.