Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಲಕೋಟೆಯಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಪತ್ತೆ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ಲಕೋಟೆಯಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಪತ್ತೆ..!

    March 31, 2025
    Share

    ಉಳ್ಳಾಲ: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಉಳ್ಳಾಲ ಪರಿಸರದ ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿ ಜನತೆಯನ್ನು ಬೆಚ್ಚಿಬೀಳಿಸಿದ್ದು, ಇದರ ಹಿಂದಿನ ಅಸಲಿಯತ್ತು ಈಗ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ಈ ಸುದ್ದಿ ಕಾಡಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು.

    ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು, ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆಯು ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.

    ಕಳೆದ ವಾರ ಚಿತ್ರಾಂಜಲಿ ನಗರದಲ್ಲಿ ಸ್ಥಳೀಯ ಸಂಘಟನೆಯೊಂದರ ವಾರ್ಷಿಕೋತ್ಸವ ನಡೆದಿತ್ತು. ವಾರ್ಷಿಕೋತ್ಸವದ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಯುವಕನೋರ್ವನ ಬಾಡಿಗೆ ಕಾಸ್ಟೋಮ್ ಈ ಪ್ರದೇಶದಲ್ಲೇ ಕಳೆದು ಹೋಗಿತ್ತು. ನಿನ್ನೆ ರಾತ್ರಿ ಯುವಕನು ಕಾ`ಮ್ ಹುಡುಕಲು ಬಂದಾಗ ಅಸ್ಥಿಗಳ ಲಕೋಟೆ ದೊರೆತಿದೆ. ಅಸ್ಥಿಗಳನ್ನ ಕಂಡು ಹೌಹಾರಿದ ಯುವಕ ಊರೆಲ್ಲಾ ಸುದ್ದಿ ಹಬ್ಬಿಸಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ.

    Post Views: 377

    Related Posts

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.