Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ

    March 8, 2026
    Share

    ಮಂಗಳೂರು: ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಕೊಲೆ ಪ್ರಕರಣವೊಂದರ ಆರೋಪಿ, ಕುಖ್ಯಾತ ರೌಡಿಶೀಟರ್‌ನ ಸಹಚರನನ್ನು ಮಂಗಳೂರು ನಗರ ಅಪರಾಧ ಪತ್ತೆ ದಳ ಪೊಲೀಸರು ಬಂಧಿಸಿ ಮುಂದಿನ ತನಿಖೆಗಾಗಿ ಸುರತ್ಕಲ್ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಬಂಧಿತನನ್ನು ಬಳ್ಳಾರಿ ಮೂಲದ ಸೂಫೀಯಾನ್ ಹುಸೇನ್ ಅಲಿಯಾಸ್ ಕೊಟ್ರೇಶಿ (31) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶ್ಯಾಮ ಪುರದ ಬೇಕರಿ ಸಮೀಪ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಸೂಫೀಯಾನ್ ಕಳೆದ ಹಲವು ವರ್ಷಗಳಿಂದ ಕಲಬುರಗಿ, ಬಳ್ಳಾರಿ, ಮುಂಬೈ ಮತ್ತು ಆಂಧ್ರ ಪ್ರದೇಶದಾದ್ಯಂತ ಅಲೆದಾಡಿ ಅಂತಿಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ. ಈ ಅವಧಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ಹೆಸರನ್ನು ‘ಹುಸೇನ್’ ಎಂದು ಬದಲಾಯಿಸಿಕೊಂಡಿದ್ದ ಆತ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಮತ್ತು ಚಾಲನಾ ಪರವಾನಗಿಯಂತಹ ಅಧಿಕೃತ ದಾಖಲೆಗಳನ್ನು ಪಡೆದು ಸ್ಥಳೀಯ ಮಹಿಳೆಯೊಬ್ಬರನ್ನು ಮದುವೆಯಾಗಿ ಹೊಸ ಗುರುತಿನೊಂದಿಗೆ ಜೀವನ ನಡೆಸುತ್ತಿದ್ದ.

    ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಕಳವು ಮಾಡಿ ಆಕೆಯನ್ನು ಕೊಲೆಗೈದ ಪ್ರಕರಣದಲ್ಲಿ ಈತ ಈ ಹಿಂದೆ ಜೈಲು ಪಾಲಾಗಿದ್ದ. ಜೈಲಿನಲ್ಲಿದ್ದಾಗ ತನ್ನನ್ನು ಸೂಫೀಯಾನ್ ಎಂದು ಪರಿಚಯಿಸಿಕೊಂಡಿದ್ದ ಈತ, ನಂತರ ಕುಖ್ಯಾತ ರೌಡಿಶೀಟರ್ ಸಫ್ವಾನ್ ಹುಸೈನ್ ಗ್ಯಾಂಗ್ ಸೇರಿಕೊಂಡಿದ್ದ ಎನ್ನಲಾಗಿದೆ.

    ಖಚಿತ ಮಾಹಿತಿಯ ಆಧಾರದ ಮೇಲೆ ನಮ್ಮ ತಂಡ ಬೆಂಗಳೂರಿನ ಡಿ.ಜೆ. ಹಳ್ಳಿಯ ರೈಲ್ವೆ ಗೇಟ್ ಬಳಿಯ ಶಾಮಪುರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಯಶಸ್ವಿಯಾಗಿ ಬಂಧಿಸಿದೆ ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೂಫೀಯಾನ್ ವಿರುದ್ಧ ಸುರತ್ಕಲ್, ಬಜ್ಪೆ, ಬಳ್ಳಾರಿ ಮತ್ತು ಹೊಸಪೇಟೆ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕಳ್ಳತನ ಮತ್ತು ದರೋಡೆ ಸೇರಿದಂತೆ ಹಲವಾರು ಪ್ರಕರಣಗಳು ದಾಖಲಾಗಿವೆ.

    Post Views: 146

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.