Facebook Twitter Instagram
    Thursday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಾಖಲೆ ಇಲ್ಲದೆ 16 ಜಾನುವಾರು ಸಾಗಾಟ: ಲಾರಿ ವಶಕ್ಕೆ,ಇಬ್ಬರು ಬಂಧನ
    ಇತ್ತೀಚಿನ ಸುದ್ದಿ

    ದಾಖಲೆ ಇಲ್ಲದೆ 16 ಜಾನುವಾರು ಸಾಗಾಟ: ಲಾರಿ ವಶಕ್ಕೆ,ಇಬ್ಬರು ಬಂಧನ

    June 18, 2026
    Share

    ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರು ವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿ ದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣದ ಪ್ರಮುಖ ಆರೋಪಿ ಲಾರಿ ಚಾಲಕ ಕಡೂರು ನಿವಾಸಿ ಪರ್ದಿನ್ ಖಾನ್, ಲಾರಿಯಲ್ಲಿದ್ದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜಾವೀದ್ ಪಾಷಾ ಬಂಧಿತರು. ಲಾರಿಯಲ್ಲಿದ್ದ ಇನ್ನೋರ್ವ ಆರೋಪಿ ರೆಹಮಾನ್ ಹೊಸೂರು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಉಪ್ಪಿನಂಗಡಿ, ಮಠ ಹಾಗೂ ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ಜೂ.17ರ ನಸುಕಿನ ಜಾವ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಹಾಸನ ಕಡೆಯಿಂದ ಬರುತ್ತಿದ್ದ ಈಚರ್ ಲಾರಿಯನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಅದರೊಳಗೆ 16 ಜಾನುವಾರುಗಳನ್ನು ಯಾವುದೇ ದಾಖಲಾತಿಗಳಿಲ್ಲದೆ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಜಾನುವಾರು ಹಾಗೂ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಹಾಸನ ಸಂತೆಯಿಂದ ಜಾನುವಾರುಗಳನ್ನು ಖರೀದಿಸಿ ಕೇರಳ ರಾಜ್ಯದ ಪಾಲಕ್ಕಾಡ್‍ಗೆ ಸಾಗಿಸುತ್ತಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 9

    karnataka PoliceInvestigation

    Related Posts

    ಬೆಳ್ತಂಗಡಿ ವಾಹನ ಸವಾರರಿಗೆ ಮಹತ್ವದ ಮಾಹಿತಿ: ಸೇತುವೆ ಕಾಮಗಾರಿ ಹಿನ್ನೆಲೆ ಮಾರ್ಗ ಬದಲಾವಣೆ

    June 18, 2026

    ರೋಗಿಗಳ ಸರಣಿ ಸಾವಿಗೆ ಯಾರು ಹೊಣೆ?- ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

    June 17, 2026

    ಆಪರೇಷನ್ ತೂಫಾನ್ ದಾಳಿ; ಕಾರಿನಲ್ಲಿ ಸಾಗಿಸುತ್ತಿದ್ದ 21 ಸಾವಿರಕ್ಕೂ ಹೆಚ್ಚು ನಿಷೇಧಿತ ತಂಬಾಕು ಪ್ಯಾಕೆಟ್ ವಶಕ್ಕೆ

    June 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ ವಾಹನ ಸವಾರರಿಗೆ ಮಹತ್ವದ ಮಾಹಿತಿ: ಸೇತುವೆ ಕಾಮಗಾರಿ ಹಿನ್ನೆಲೆ ಮಾರ್ಗ ಬದಲಾವಣೆ

    June 18, 2026

    ದಾಖಲೆ ಇಲ್ಲದೆ 16 ಜಾನುವಾರು ಸಾಗಾಟ: ಲಾರಿ ವಶಕ್ಕೆ,ಇಬ್ಬರು ಬಂಧನ

    June 18, 2026

    ರೋಗಿಗಳ ಸರಣಿ ಸಾವಿಗೆ ಯಾರು ಹೊಣೆ?- ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

    June 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.