Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಕ್ರಮ ಜಾನುವಾರು ಸಾಗಾಟ- ಮೂವರು ಆರೋಪಿಗಳ ಬಂಧನ!!
    ಇತ್ತೀಚಿನ ಸುದ್ದಿ

    ಉಡುಪಿ: ಅಕ್ರಮ ಜಾನುವಾರು ಸಾಗಾಟ- ಮೂವರು ಆರೋಪಿಗಳ ಬಂಧನ!!

    April 6, 2026
    Share

    ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಮೂವರನ್ನು ಬಂಧಿಸಿದ್ದಾರೆ.  

    ಮುಸ್ತಾಕ್ ಹುಸೇನ್ ಸಾಬ್ ನದಾಫ್ (29), ಸಲೀಂ ಹುಸೇನ್ ಸಾಬ್ ನದಾಫ್ (33) ಹಾಗೂ ನದೀಂ ಅಬ್ದುಲ್ ಖಾದರ್ (34) ಬಂಧಿತರು.  ಏಪ್ರಿಲ್ 5ರಂದು ಮುಂಜಾನೆ ಸುಮಾರು 5 ಗಂಟೆಗೆ ಪೊಲೀಸರು ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುವಾಗ, ಹುಲಿಕಲ್ ಘಾಟಿ ದಿಕ್ಕಿನಿಂದ ಬರುತ್ತಿದ್ದ ಟಾಟಾ ಇಂಟ್ರಾ ವಾಹನವನ್ನು ತಡೆದು ಪರಿಶೀಲಿಸಿದಾಗ ಎರಡು ಎತ್ತುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ.

    ಚಾಲಕರನ್ನು ವಿಚಾರಿಸಿದಾಗ, ಜಾನುವಾರುಗಳನ್ನು ವಧೆಗಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ದೊರಕಿದೆ. ಜಾನುವಾರುಗಳ ಅಂದಾಜು ಮೌಲ್ಯ ರೂ.1 ಲಕ್ಷವಾಗಿದ್ದು, ವಾಹನದ ಮೌಲ್ಯ ರೂ.4 ಲಕ್ಷ ಎಂದು ಅಂದಾಜಿಸಲಾಗಿದೆ. ಈ ವೇಳೆ ಅದೇ ದಿಕ್ಕಿನಿಂದ ಟೊಯೋಟಾ ಇಟಿಯೊಸ್ ಕಾರು ಅಕ್ರಮ ಸಾಗಾಟಕ್ಕೆ ಬೆಂಗಾವಲಾಗಿ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಕಾರನ್ನು ತಡೆದು ನಿಲ್ಲಿಸಿದಾಗ, ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದು, ಮತ್ತೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪೊಲೀಸರು ಜಾನುವಾರುಗಳೊಂದಿಗೆ ಎರಡೂ ವಾಹನಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

    Post Views: 173

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.