Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ

    April 13, 2026
    Share

    ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.

    ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಕೆ.ಸಿ. ಹಾಗೂ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ, ತೋಡಾರು ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ತೋಡಾರು ಗ್ರಾಮದ ಪ್ರವೇಶದ್ವಾರದ ಬಳಿ ಗರಡಿ ಕಡೆಯಿಂದ ಬರುತ್ತಿದ್ದ ವ್ಯಾಗನ್-ಆರ್ ಕಾರು ಮತ್ತು ಅದನ್ನು ಹಿಂಬಾಲಿಸುತ್ತಿದ್ದ ಪಿಕಪ್ ವಾಹನವನ್ನು ತಡೆಯಲು ಸಂಕೇತ ನೀಡಿದರು. ಆದರೆ, ವಾಹನಗಳು ನಿಲ್ಲಿಸದೆ ಮುನ್ನುಗ್ಗಿದಾಗ ಪೊಲೀಸರು ಬೆನ್ನಟ್ಟಿ ಅವುಗಳನ್ನು ತಡೆದಿದ್ದಾರೆ.

    ಪೊಲೀಸರು ವಾಹನವನ್ನು ಸುತ್ತುವರಿಯುತ್ತಿದ್ದಂತೆಯೇ, ಪಿಕಪ್ ಚಾಲಕ ಹರ್ಷದ್ ಮತ್ತು ಆತನೊಂದಿಗಿದ್ದ ಇತರರು ಸ್ಥಳದಿಂದ ಓಡಿಹೋಗಿದ್ದಾರೆ. ಪಿಕಪ್ ವಾಹನಕ್ಕೆ ಬೆಂಗಾವಲಾಗಿ (ಎಸ್ಕಾರ್ಟ್) ಬಂದಿದ್ದ ವ್ಯಾಗನ್-ಆರ್ ಕಾರಿನ ಚಾಲಕ ಸಫರ್ ಹಾಗೂ ಹಂಡೇಲು ನಿವಾಸಿ ಅಬೂಬಕರ್ ಕೂಡ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

    ಪೊಲೀಸರು ಪಿಕಪ್ ವಾಹನವನ್ನು ಪರಿಶೀಲಿಸಿದಾಗ, ಅದರಲ್ಲಿ ಎರಡು ಹಸುಗಳು, ಎರಡು ಎತ್ತುಗಳು ಮತ್ತು ನಾಲ್ಕು ಗಂಡು ಕರುಗಳನ್ನು ಕಾಲು ಮತ್ತು ಕುತ್ತಿಗೆಗೆ ಹಗ್ಗದಿಂದ ಬಿಗಿದು ಅತ್ಯಂತ ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ. ಸದ್ಯ ಪೊಲೀಸರು ಈ ಎಲ್ಲಾ ಜಾನುವಾರುಗಳನ್ನು ರಕ್ಷಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 78

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.