Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಅಕ್ರಮ ಗೋ ವಧೆ ವೇಳೆ ಪೊಲೀಸ್‌‌ ದಾಳಿ; 96 ಕೆ.ಜಿ ದನದ ಮಾಂಸ ಸಹಿತ ಹಲವು ಸೊತ್ತುಗಳು ವಶ..!
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಅಕ್ರಮ ಗೋ ವಧೆ ವೇಳೆ ಪೊಲೀಸ್‌‌ ದಾಳಿ; 96 ಕೆ.ಜಿ ದನದ ಮಾಂಸ ಸಹಿತ ಹಲವು ಸೊತ್ತುಗಳು ವಶ..!

    September 22, 2024
    Share

    ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ರಫಿಕ್, ನಝೀರ್, ಉಬೈದ್, ಅಶ್ರಫ್, ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ಖತೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಅವಿನಾಶ್‌ ಹೆಚ್‌ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿರುತ್ತಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿ ಅಂದಾಜು ರೂ 24,000/-ಮೌಲ್ಯದ 96 ಕೆ.ಜಿ ದನದ ಮಾಂಸ, ದೇಹದ ಅಂಗಾಂಗಗಳು, ಮಾಂಸ ಮಾಡಲು ಬಳಸಿದ ಚೂರಿಗಳು, ಕಬ್ಬಿಣದ ಎಲೆಕ್ಟ್ರೋನಿಕ್ ತೂಕ ಮಾಪನ ಹಾಗು ಇತರ ಸೊತ್ತುಗಳು, 2 ಅಟೋರಿಕ್ಷಾಗಳು, 1 ಮೊಟಾರ್ ಸೈಕಲ್ ಪತ್ತೆಯಾಗಿರುತ್ತದೆ. ಸೊತ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 107/2024 ಕಲಂ: 12 ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ: 3(5) ಭಾರತೀಯ ನ್ಯಾಯ ಸಂಹಿತೆ ಯಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಪೋಲಿಸರು ಬಲೆಬೀಸಿದ್ದು, ಪತ್ತೆಗೆ ವಿಶೇಷ ತಂಡ ರಚಿಸಿ, ಶೋಧಕಾರ್ಯ ಆರಂಭಿಸಿದ್ದಾರೆ.

    Post Views: 230

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.