ಮಂಗಳೂರು: ದ.ಕ ಜಿಲ್ಲೆಯಲ್ಲಿ ಅಕ್ರಮ ಇತ್ತೀಚೆಗೆ ನಿರಂತರವಾಗಿ ಅಕ್ರಮ ಗೋಸಾಗಾಟ ನಡೆಯುತ್ತಲೇ ಇದೆ. ಇದೀಗ ಮತ್ತೊಂದು ಪ್ರಕರಣ ಬಯಲಾಗಿದೆ. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಘಟನೆ ಇಂದು ಮುಂಜಾನೆ ಮಂಗಳೂರಿನ ಕುಲಶೇಖರ ಕೈಕಂಬ ಬಳಿ ನಡೆದಿದೆ.

ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರ್ ನಲ್ಲಿದ್ದ ನೂರು ಕೆಜಿಗೂ ಅಧಿಕ ಗೋಮಾಂಸ ಸಾಗಾಟ ಮಾಡುತ್ತಿದ್ದಾಗ ಪತ್ತೆ ಹಚ್ಚಿದ್ದಾರೆ.
ಹಿಂದೂ ಕಾರ್ಯಕರ್ತರು ಈ ಅಕ್ರಮವನ್ನು ಪತ್ತೆ ಹಚ್ಚಿದಾಗ ಸ್ಕೂಟರ್ ಸವಾರ ಗಾಡಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.