Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಅಕ್ರಮವಾಗಿ ಮಾದಕ ವಸ್ತು ಸಾಗಾಟ : ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಕ್ರಮವಾಗಿ ಮಾದಕ ವಸ್ತು ಸಾಗಾಟ : ಆರೋಪಿಯ ಬಂಧನ

    January 19, 2024
    Share

    ಉಳ್ಳಾಲ: ಮಂಗಳೂರು ಸಮೀಪದಲ್ಲಿ ಮಾದಕ ವಸ್ತು ಅಕ್ರಮ ಸಾಗಾಟ ನಡೆಸುತ್ತಿದ್ದ ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಸಿಯಾಮು(26)ನನ್ನು ಎಸಿಪಿ ಧನ್ಯಾ ಎನ್‌. ನಾಯಕ್‌ ನೇತೃತ್ವದ ಆ್ಯಂಟಿ ಡ್ರಗ್‌ ಟೀಮ್‌ ಬಂಧಿಸಿದ್ದು, ಆತನಿಂದ 1.05 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಕಲ್ಲಾಪು ಯುನಿಟಿ ಹಾಲ್‌ ಬದಿಯ ಮೈದಾನದ ಬಳಿ ದಾಳಿ ನಡೆಸಿ ಸಿಯಾಮುನನ್ನು ಬಂಧಿಸಲಾಗಿದೆ.

    ಆ್ಯಂಟಿ ಡ್ರಗ್‌ ಟೀಮ್‌ ರಚನೆಯಾದ ಬಳಿಕ 4 ದೊಡ್ಡ ಪ್ರಕರಣ ಸೇರಿದಂತೆ 65 ಪ್ರಕರಣಗಳು ದಾಖಲಾಗಿದ್ದು, 6 ಆರೋಪಿಗಳು ಜೈಲು ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಗಾಂಜಾ, ಎಂಡಿಎಂಎ, ಎಲ್‌ಎಸ್‌ಡಿ ಸ್ಟಿಕ್ಕರ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

    ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್‌ ಆಯುಕ್ತ ಅನುಪಮ್‌ ಅಗರವಾಲ್‌, ಉಪ ಆಯುಕ್ತರಾದ ಸಿದ್ಧಾರ್ಥ ಗೋಯಲ್‌, ದಿನೇಶ್‌ ಕುಮಾರ್‌ ನಿರ್ದೇಶನದಲ್ಲಿ ಎಸಿಪಿ ಧನ್ಯಾ ನಾಯಕ್‌ ಮತ್ತು ಇನ್‌ಸ್ಪೆಕ್ಟರ್‌ ಬಾಲಕೃಷ್ಣ ಎಚ್‌.ಎನ್‌. ನೇತೃತ್ವದಲ್ಲಿ ಉಳ್ಳಾಲ ಪಿಎಸ್‌ಐ ಧನರಾಜ್‌ ಎಸ್‌., ಆ್ಯಂಟಿ ಡ್ರಗ್‌ ಟೀಮ್‌ನ ಶಾಜು ನಾಯರ್‌, ಮಹೇಶ್‌, ಆಕರ್‌ಯಡ್ರಾಮಿ, ನವೀನ್‌ ಕೆ.ಪಿ. ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Post Views: 213

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.