ಮಂಗಳೂರು ನಗರದ ಟಿ.ವಿ. ರಮಣ್ ಪೈ ಕನ್ವೆನ್ಶನ್ ಸೆಂಟರ್ ಎದುರಿನ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ವಿದೇಶಿ ಮದ್ಯ ಸಹಿತ ಓರ್ವನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ದಿನಕರ ಪಾಂಡೇಶ್ವರ ಬಂಧಿತ ಆರೋಪಿ. ಯಾವುದೇ ದಾಖಲಾತಿ ಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ತೆರಿಗೆ ಪಾವತಿಸದ 6 ಲೀ. ಮದ್ಯವನ್ನು ಆತನಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದರ ಒಟ್ಟು ಮೌಲ್ಯ 83,140 ರೂ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಅವರ ಆದೇಶದಂತೆ ದ.ಕ ಜಿಲ್ಲಾ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ ಮಂಗಳೂರು ಉಪ ವಿಭಾಗ-1 ಅಬಕಾರಿ ಉಪಾಧೀ ಕ್ಷಕರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರು ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.