Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಮರಳು, ಶಿಲೆಕಲ್ಲು ಸಾಗಾಟ : ನಾಲ್ವರ ಬಂಧನ, ಮೂರು ಲಾರಿ ವಶ
    ಇತ್ತೀಚಿನ ಸುದ್ದಿ

    ಅಕ್ರಮ ಮರಳು, ಶಿಲೆಕಲ್ಲು ಸಾಗಾಟ : ನಾಲ್ವರ ಬಂಧನ, ಮೂರು ಲಾರಿ ವಶ

    January 6, 2026
    Share

    ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು, ಶಿಲೆಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ನಾಲ್ವರನ್ನು ಬಂಧಿಸಿ, ಮೂರು ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಬೆಟ್ಟು ಅತ್ತೂರು ಚರ್ಚ್ ದ್ವಾರದ ಬಳಿ ಜ.5ರಂದು ಅಕ್ರಮವಾಗಿ 3 ಯುನಿಟ್ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿ ಚೇರ್ಕಾಡಿ ಪೇತ್ರಿಯ ವಿನ್ವೆಂಟ್ ಪ್ರಕಾಶ ಅಲೇಡಾ(54) ಹಾಗೂ ಚಾಲಕ ಮುಡಾರು ಗ್ರಾಮದ ದಿಡಿಂಬಿರಿಯ ಸಮೇಗ್ಸ್ ಜೈನ್(25) ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಮಣೂರು ಗ್ರಾಮದ ಬಾಳೆಬೆಟ್ಟು ಬಸ್ ನಿಲ್ದಾಣದ ಬಳಿ ಜ.5ರಂದು ಅಕ್ರಮವಾಗಿ ಚಪ್ಪಡಿ ಕಲ್ಲುಗಳನ್ನು ಸಾಗಿಸುತ್ತಿದ್ದ ಟಿಪ್ಪರನ್ನು ವಶಪಡಿಸಿಕೊಂಡ ಪೊಲೀಸರು, ಚಾಲಕನ ಶಿವಮೊಗ್ಗ ಹೊಸನಗರ ತಾಲೂಕಿನ ಸುರೇಶ(54) ಎಂಬಾತನನ್ನು ಬಂಧಿಸಿದ್ದಾರೆ. ಲಾರಿಯಲ್ಲಿದ್ದ 30 ಸಾವಿರ ರೂ. ಮೌಲ್ಯದ 12 ಟನ್ ಚಪ್ಪಡಿ ಶಿಲೆಕಲ್ಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ರಿಂಗ್ ರೋಡ್ ಬಳಿ ಜ.2ರಂದು ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು, ಚಾಲಕ ಕಾರ್ಕಳ ತೆಳ್ಳಾರು ನಿವಾಸಿ ಶೇಖ್ ನದೀಮ್(30) ಎಂಬಾತನನ್ನು ಬಂಧಿಸಿದ್ದಾರೆ. ಲಾರಿಯಲ್ಲಿದ್ದ 13000ರೂ. ಮೌಲ್ಯದ ಮೂರು ಯುನಿಟ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ.

    Post Views: 85

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.