Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಅಕ್ರಮವಾಗಿ ಮರಳು ಸಾಗಾಟ- ಆರೋಪಿಯನ್ನು ಬಂಧಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಅಕ್ರಮವಾಗಿ ಮರಳು ಸಾಗಾಟ- ಆರೋಪಿಯನ್ನು ಬಂಧಿಸಿದ ಪೊಲೀಸರು

    September 4, 2025
    Share

    ಬೆಳ್ತಂಗಡಿ :ಅಕ್ರಮವಾಗಿ ಮರಳು ಸಾಗಾಟದ ಪ್ರಕರಣವೊಂದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ ಧನಕೀರ್ತಿ ಎಂಬಾತನಾಗಿದ್ದಾನೆ.

    ಸೆ. 2ರಂದು ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ  ಗ್ರಾಮದ ಕೊಕ್ರಾಡಿ ಬಳಿ ನಾರಾವಿ- ವೇಣೂರು – ಸಾರ್ವಜನಿಕ ರಸ್ತೆಯಲ್ಲಿ ನಾರಾವಿ ಕಡೆಯಿಂದ ವೇಣೂರು ಕಡೆಗೆ ಬರುತ್ತಿದ್ದ 407 ಗೂಡ್ಸ್ ಮಿನಿ ಟಿಪ್ಪರ್  ನಂಬ್ರ KA 70.4468  ನೇದರಲ್ಲಿ ಮರಳು ಸಾಗಾಟ ಮಾಡುತ್ತಿರುವುದನ್ನು ಗಮನಿಸಿದ ಪೊಲೀಸರು ವಾಹನವನ್ನು ತಡೆದು  ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಟಿಪ್ಪರ್ ಚಾಲಕನಲ್ಲಿ ಮರಳು  ಸಾಗಾಟದ  ಬಗ್ಗೆ  ಯಾವುದೇ  ದಾಖಲೆ/ಪರವಾನಿಗೆ ಇಲ್ಲದಿರುವುದು ಕಂಡುಬಂದಿದೆ ಅಲ್ಲದೇ ಸದ್ರಿ ಮರಳನ್ನು ಸುಲ್ಕೇರಿ  ಗ್ರಾಮದ ಸುಲ್ಕೇರಿ  ಎಂಬಲ್ಲಿ ಹರಿಯುವ ನದಿಯಿಂದ ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ    ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

    ಇದರಲ್ಲಿದ್ದ ಸುಮಾರು ಒಂದೂವರೆ ಯೂನಿಟ್ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ   6,000/- ಗಳಾಗಿದ್ದು ಅದನ್ನು ವಶಕ್ಕೆ ಪಡೆಯಲಾಗಿದೆ, ಸಾಗಾಟಕ್ಕೆ ಬಳಸಿದ ವಾಹನದ ಅಂದಾಜು ಮೌಲ್ಯ ರೂ 2 ಲಕ್ಷ ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ

    Post Views: 94

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.