Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ – ಐದು ದೋಣಿಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ – ಐದು ದೋಣಿಗಳು ವಶಕ್ಕೆ

    December 19, 2023
    Share

    ಮಂಗಳೂರು: ನಗರದ ಕಣ್ಣೂರು, ಬಜಾಲ್ ಹಾಗೂ ಬಡ್ಡ ಗ್ರಾಮದ ಸಿ.ಆರ್.ಝಡ್ ವಲಯದಲ್ಲಿ ಹರಿಯುವ ನೇತ್ರಾವತಿ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಗಣಿ ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಐದು ದೋಣಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಗಣಿ ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿವಕೆ ಎಂ ನಾಗಭೂಷಣ್ ಮತ್ತು ಭೂವಿಜ್ಞಾನಿಗಳಾದ ಗಿರೀಶ್‌ ಮೋಹನ್ ಎಸ್ ಎನ್, ಡಾ॥ ಮಹದೇಶ್ವರ ಹೆಚ್.ಎಸ್ ಕಾರ್ಯಾಚರಣೆ ನಡೆಸಿದ್ದಾರೆ. ಇವರು ಕಣ್ಣೂರು ಗ್ರಾಮದ ಮಸೀದಿಯ ಬಳಿ ಹೋಗಿ ಅಲ್ಲಿಂದ ಮೋಟಾರು ಚಾಲಿತ ದೋಣಿಯಲ್ಲಿ ನೇತ್ರಾವತಿ ನದಿಯಲ್ಲಿ ಬಡ್ಲ ಬಜಾಲ್ ಎಂಬ ಪ್ರದೇಶಕ್ಕೆ ತೆರಳಿ ಅಕ್ರಮ ಸಾಮಾನ್ಯ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಐದು ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ತೋಹಿಬ್ ಅಲಿಯಾಸ್ ಅಬ್ದುಲ್ ಹಮೀದ್, ಅಝರ್ ಬಜಾಲ್, ಹಸನಬ್ಬ, ಅಬ್ದುಲ್ ರೆಹಮಾನ್ ದೋಣಿಗಳ ಮಾಲಕರಾಗಿದ್ದಾರೆ. ಆರೋಪಿಗಳು ತಾವಾಗಿಯೇ ವಶಕ್ಕೆ ತೆಗೆದುಕೊಂಡಿರುವ ದೋಣಿಗಳು ತಮ್ಮದೆಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ ಸ್ಥಳೀಯರೂ ಈ ದೋಣಿಗಳು ಅವರದ್ದೇ ಎಂದು ಖಚಿತವಾಗಿ ಒಪ್ಪಿಕೊಂಡಿದ್ದಾರೆ. ಆದ್ದರಿಂದ ಇವರುಗಳ ವಿರುದ್ಧ ಪ್ರಕರಣ ದಾಖಲಾಗಿದೆ.

    Post Views: 215

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.