Facebook Twitter Instagram
    Tuesday, November 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ-ಲಾರಿ ವಶಕ್ಕೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ-ಲಾರಿ ವಶಕ್ಕೆ

    November 9, 2026
    Share

    ಬಂಟ್ವಾಳ: ಸಾರ್ವಜನಿಕ ರಸ್ತೆಯಲ್ಲಿ ದುರಸ್ತಿಗೀಡಾಗಿ ನಿಂತಿದ್ದ ಲಾರಿಯಲ್ಲಿ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಿಸುತ್ತಿರುವುದು ಪತ್ತೆಯಾಗಿದ್ದು, ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

    ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಲಾರಿಯೊಂದು ದುರಸ್ತಿಗೀಡಾಗಿ ನಿಂತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಕೆಎ 21 ಸಿ 4608 ನೋಂದಣಿ ಸಂಖ್ಯೆಯ ಲಾರಿ ರಸ್ತೆಯಲ್ಲಿ ನಿಂತಿರುವುದು ಕಂಡುಬಂದಿದೆ.

    ಲಾರಿಯ ಚಾಲಕ, ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಇರ್ಫಾನ್ ಪಾಷಾ (40) ಅವರನ್ನು ವಿಚಾರಿಸಿದಾಗ, ಲಾರಿ ದುರಸ್ತಿಗೀಡಾಗಿರುವುದಾಗಿ ತಿಳಿಸಿದ್ದಾರೆ. ಲಾರಿಯಲ್ಲಿದ್ದ ಮಣ್ಣಿನ ಸಾಗಾಟದ ಬಗ್ಗೆ ಪರಿಶೀಲಿಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣನ್ನು ಸಾಗಿಸುತ್ತಿರುವುದು ತಿಳಿದುಬಂದಿದೆ.

    ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 229/2026ರಂತೆ ಬಿಎನ್‌ಎಸ್ 2023ರ ಕಲಂ 303(2), ಎಂಎಂಡಿಆರ್ ಕಾಯ್ದೆ 1957ರ ಕಲಂ 4(1), 4(1ಎ), 21 ಹಾಗೂ ಕರ್ನಾಟಕ ಸಣ್ಣ ಖನಿಜ ರಿಯಾಯಿತಿ ನಿಯಮಗಳು 1994ರ ಕಲಂ 3, 44ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

    Post Views: 11

    Related Posts

    ಮಂಗಳೂರು: ಜಾಮೀನಿನ ಮೇಲೆ ಹೊರಬಂದ ಧರ್ಮಗುರುಗೆ ಮತ್ತೆ ಸಂಕಷ್ಟ – ಮತ್ತೊಂದು ಎಫ್‌ಐಆರ್ ದಾಖಲು

    November 10, 2026

    ಉಡುಪಿ: ಪೆಟ್ರೋಲ್ ಪಂಪ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!!

    November 9, 2026

    ಉಡುಪಿ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ನಾಲ್ವರು ಆರೋಪಿಗಳ ಬಂಧನ

    November 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಜಾಮೀನಿನ ಮೇಲೆ ಹೊರಬಂದ ಧರ್ಮಗುರುಗೆ ಮತ್ತೆ ಸಂಕಷ್ಟ – ಮತ್ತೊಂದು ಎಫ್‌ಐಆರ್ ದಾಖಲು

    November 10, 2026

    ಉಡುಪಿ: ಪೆಟ್ರೋಲ್ ಪಂಪ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!!

    November 9, 2026

    ಬಂಟ್ವಾಳ: ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ-ಲಾರಿ ವಶಕ್ಕೆ

    November 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.