Facebook Twitter Instagram
    Tuesday, November 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ.3ರಿಂದ ನ.7ರವರೆಗೆ ನಿಷೇಧಾಜ್ಞೆ ಜಾರಿ- ಧರಣಿ, ಪ್ರತಿಭಟನೆ, ಮೆರವಣಿಗೆಗೆ ತಡೆ
    ಇತ್ತೀಚಿನ ಸುದ್ದಿ

    ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ.3ರಿಂದ ನ.7ರವರೆಗೆ ನಿಷೇಧಾಜ್ಞೆ ಜಾರಿ- ಧರಣಿ, ಪ್ರತಿಭಟನೆ, ಮೆರವಣಿಗೆಗೆ ತಡೆ

    November 3, 2026
    Share

    ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 3ರಿಂದ ನವೆಂಬರ್ 7ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

    ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಪರಿಗಣಿಸಿ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯನ್ನು ಆಧರಿಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರಡಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

    ನವೆಂಬರ್ 3ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 7ರ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳನ್ನು ಹೊರತುಪಡಿಸಿ ಯಾವುದೇ ಧರಣಿ, ಪ್ರತಿಭಟನೆ, ಮೆರವಣಿಗೆ ಅಥವಾ ಅನಿರ್ದಿಷ್ಟಾವಧಿ ಮುಷ್ಕರಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

    ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ. ಶಸ್ತ್ರಾಸ್ತ್ರಗಳು, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ ಸೇರಿದಂತೆ ವ್ಯಕ್ತಿಗಳ ದೇಹಕ್ಕೆ ಹಾನಿ ಉಂಟುಮಾಡಬಲ್ಲ ಯಾವುದೇ ಮಾರಕಾಸ್ತ್ರಗಳನ್ನು ಸಾಗಿಸುವುದು ಹಾಗೂ ಅವುಗಳೊಂದಿಗೆ ಸಾರ್ವಜನಿಕವಾಗಿ ಸಂಚರಿಸುವುದನ್ನು ನಿರ್ಬಂಧಿಸಲಾಗಿದೆ.
    ಮೃತದೇಹಗಳು, ಅವುಗಳ ಆಕೃತಿಗಳು ಅಥವಾ ಪ್ರತಿಕೃತಿಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದು ಹಾಗೂ ದಹನ ಮಾಡುವುದಕ್ಕೂ ನಿಷೇಧ ಹೇರಲಾಗಿದೆ. ನಿಷೇಧಾಜ್ಞೆಯ ಅವಧಿಯಲ್ಲಿ ಧ್ವನಿವರ್ಧಕಗಳ ಬಳಕೆಗೆ ಅವಕಾಶವಿರುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗ ಘೋಷಣೆಗಳನ್ನು ಕೂಗುವುದು, ಹಾಡುವುದು, ವಾದ್ಯಗಳನ್ನು ನುಡಿಸುವುದು, ಭಾಷಣ ಅಥವಾ ವ್ಯಾಖ್ಯಾನ ನೀಡುವುದು, ಸನ್ನೆ ಹಾಗೂ ಅಣಕು ಪ್ರದರ್ಶನಗಳ ಮೂಲಕ ಸಾರ್ವಜನಿಕ ಶಾಂತಿ ಮತ್ತು ಸಭ್ಯತೆಗೆ ಧಕ್ಕೆ ತರುವ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
    ಅಲ್ಲದೆ, ಪ್ರಚೋದನಾತ್ಮಕ ಹಾಗೂ ಉದ್ವೇಗಕಾರಿ ಹಾಡುಗಳನ್ನು ಹಾಡುವುದು, ಕೂಗಾಟ ನಡೆಸುವುದು, ವ್ಯಕ್ತಿಗಳ ತೇಜೋವಧೆ ಮಾಡುವ ಚಿತ್ರಗಳು, ಚಿಹ್ನೆಗಳು ಅಥವಾ ಪ್ರತಿಕೃತಿಗಳನ್ನು ಪ್ರದರ್ಶಿಸುವುದು ಹಾಗೂ ಸಾರ್ವಜನಿಕ ಗಾಂಭೀರ್ಯ, ನೈತಿಕತೆ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದನ್ನು ನಿರ್ಬಂಧಿಸಲಾಗಿದೆ.
    ನಿಷೇಧಿತ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಅಥವಾ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡುಬಂದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಅಂತಹ ವಸ್ತುಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದರ ಜೊತೆಗೆ, ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದಾಗ್ಯೂ, ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸರ್ಕಾರಿ ಕರ್ತವ್ಯದಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ನಿಷೇಧಾಜ್ಞೆಯ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

    Post Views: 5

    Related Posts

    ನಿಲ್ಲಿಸಿದ್ದ ಲಾರಿಗೆ ಬೈಕ್‌ ಡಿಕ್ಕಿ-ಇಬ್ಬರು ಯುವಕರು ಮೃತ್ಯು!!

    November 3, 2026

    ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ: ಸಂತ್ರಸ್ತೆಯ ಫೋಟೋ ಹಂಚಿದ 150 ಖಾತೆಗಳ ಪತ್ತೆ- ಕಠಿಣ ಕ್ರಮದ ಎಚ್ಚರಿಕೆ

    November 3, 2026

    ಮಂಗಳೂರು: ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಮಹಿಳೆಯ ಬಂಧನ

    November 3, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಿಲ್ಲಿಸಿದ್ದ ಲಾರಿಗೆ ಬೈಕ್‌ ಡಿಕ್ಕಿ-ಇಬ್ಬರು ಯುವಕರು ಮೃತ್ಯು!!

    November 3, 2026

    ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ.3ರಿಂದ ನ.7ರವರೆಗೆ ನಿಷೇಧಾಜ್ಞೆ ಜಾರಿ- ಧರಣಿ, ಪ್ರತಿಭಟನೆ, ಮೆರವಣಿಗೆಗೆ ತಡೆ

    November 3, 2026

    ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ: ಸಂತ್ರಸ್ತೆಯ ಫೋಟೋ ಹಂಚಿದ 150 ಖಾತೆಗಳ ಪತ್ತೆ- ಕಠಿಣ ಕ್ರಮದ ಎಚ್ಚರಿಕೆ

    November 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.