Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    September 21, 2025
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಓರ್ವ ವಂಚನೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನವು ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳಲ್ಲಿ ಅತ್ಯಂತ ಹಳೆಯ ಪ್ರಕರಣಗಳಲ್ಲಿ ಒಂದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಕ್ರೈಂ ನಂ 32/1970 ರಲ್ಲಿ ದಾಖಲಾದ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ನಿವಾಸಿ, ಪ್ರಸ್ತುತ 78 ವರ್ಷದ ಚಂದ್ರನ್ ಎಂಬಾತ 55 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಎಲ್‌ಪಿಸಿ (LPC: 2/1972) ವಾರಂಟ್ ಜಾರಿಯಾಗಿತ್ತು.


    ಪೊಲೀಸರು ನಡೆಸಿದ ನಿರಂತರ ಶೋಧ ಕಾರ್ಯಾಚರಣೆಯ ನಂತರ ಕೇರಳದ ಕ್ಯಾಲಿಕಟ್‌ನ ಪುಲ್ಲಿಕಲ್ ಎಂಬಲ್ಲಿ ತಲೆಮರೆಸಿಕೊಂಡಿದ್ದ ಚಂದ್ರನ್‌ನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ಆತನನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    ಇಷ್ಟು ಹಳೆಯ ಪ್ರಕರಣವನ್ನು ಭೇದಿಸಿದ್ದು ಅಪರೂಪದ ಘಟನೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ಮಾಹಿತಿಗಳನ್ನು ಆಧರಿಸಿ ಹಾಗೂ ತಾಂತ್ರಿಕ ನೆರವು ಪಡೆದು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ತಂಡದ ಕಾರ್ಯವನ್ನು ಉನ್ನತ ಅಧಿಕಾರಿಗಳು ಶ್ಲಾಘಿಸಿದ್ದಾರೆ.

    Post Views: 163

    Related Posts

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.