Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ: ಸುಪ್ರೀಂನಲ್ಲಿ ಪಿಐಎಲ್‌ ಸಲ್ಲಿಕೆ
    ಇತ್ತೀಚಿನ ಸುದ್ದಿ

    ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ: ಸುಪ್ರೀಂನಲ್ಲಿ ಪಿಐಎಲ್‌ ಸಲ್ಲಿಕೆ

    May 25, 2023
    Share

    ನವದೆಹಲಿ : ನೂತನ ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಕಾಂಗ್ರೆಸ್‌, ಟಿಎಂಸಿ, ಆಪ್‌, ಜೆಡಿಯು ಸೇರಿದಂತೆ 20 ವಿರೋಧ ಪಕ್ಷಗಳು ಬಹಿಷ್ಕಾರ ಹಾಕಿದ ಬೆನ್ನಲ್ಲೇ ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡದೇ ಪ್ರಧಾನಿ ಮೋದಿ ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ ಎಂದು ವಕೀಲ ಸಿಆರ್ ಜಯ ಸುಕಿನ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ. ಸಂಸತ್ತು ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಇರುವುದರಿಂದ ಅವರಿಂದಲೇ ಲೋಕಾರ್ಪಣೆ ಮಾಡಬೇಕೆಂದು ಮನವಿ ಮಾಡಲಾಗಿದೆ. ರಾಷ್ಟ್ರಪತಿ ಸಂಸತ್ತಿನ ಅವಿಭಾಜ್ಯ ಅಂಗ. ಶಿಲಾನ್ಯಾಸ ಸಮಾರಂಭದಿಂದ ರಾಷ್ಟ್ರಪತಿಯನ್ನು ದೂರವಿಟ್ಟಿದ್ದು ಏಕೆ? ಈಗ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯವರನ್ನು ಆಹ್ವಾನಿಸುತ್ತಿಲ್ಲ. ಸರಕಾರದ ಈ ನಿರ್ಧಾರ ಸರಿಯಲ್ಲ ಎಂದು ದೂರಲಾಗಿದೆ. ಲೋಕಸಭಾ ಸಚಿವಾಲಯ, ಗೃಹ ಸಚಿವಾಲಯ, ಕಾನೂನು ಸಚಿವಾಲಯಗಳನ್ನು ಅರ್ಜಿದಾರರು ಈ ಪ್ರಕರಣದಲ್ಲಿ ಪಾರ್ಟಿ ಮಾಡಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

    Post Views: 207

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.