Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ
    ಇತ್ತೀಚಿನ ಸುದ್ದಿ

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026
    Share

    ಮಂಗಳೂರು: ಬಂಟ ಸಮುದಾಯದವರು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಅನನ್ಯ ಸಾಧನೆ ಮಾಡಿದ್ದು, ಚಲನಚಿತ್ರ ರಂಗದಲ್ಲಂತೂ ಇವರು ಅಪೂರ್ವ ಕೊಡುಗೆ ನೀಡಿದ್ದಾರೆ. ಬಂಟರು ನಾಯಕತ್ವ ಗುಣ ಉಳ್ಳವರು, ಎದೆಗಾರಿಕೆ ಉಳ್ಳವರು, ನಾಯಕತ್ವದಲ್ಲಿ ಗೆದ್ದವರು, ಬಂಟರು ಇತರ ಸಮಾಜದವರನ್ನು ಪ್ರೀತಿ ಮಾಡಿದವರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಹೇಳಿದರು.
    ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯುತ್ತಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಥಮ ದಿನದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.


    ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಬರೋಡ ಶಶಿಧರ ಶೆಟ್ಟಿ ಅವರು ಮಾತನಾಡಿ ಗಣೇಶೋತ್ಸವದ ಮೂಲ ಉದ್ದೇಶ ಸಂಘಟನೆ, ಐಕ್ಯತೆಯನ್ನು ಸಾರುವುದು, ಗಣಪನಿಗೆ ಮೊದಲ ಪೂಜೆ, ಬಂಟ್ಸ್ ಹಾಸ್ಟೇಲ್ ನ ಸಿದ್ದಿವಿನಾಯಕ ಪ್ರತಿಷ್ಠಾನದಲ್ಲಿ ನಡೆಯುವ ಗಣೇಶೋತ್ಸವ ಶಿಸ್ತು ಬದ್ದತೆಯಿಂದ ಕೂಡಿದೆ ಎಂದರು.
    ಉದ್ಯಮಿ ರಂಜಿತ್ ರೈ ಅವರು ಮಾತನಾಡಿ, ಇಲ್ಲಿ ನಡೆಯುವ ಗಣೇಶೋತ್ಸವ ಮಾದರಿಯಾಗಿದೆ ಎಂದರು.
    ಈ ಸಂದರ್ಭದಲ್ಲಿ ಮೂಡದ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಪರಿಸರ ಹಾಗೂ ಪವಾಸೋದ್ಯಮ ನಿಗಮದ ಅಧ್ಯಕ್ಷೆ ಶಾರ್ಲೆಟ್ ಪಿಂಟೋ ಅವರನ್ನು ಅಭಿನಂದಿಸಲಾಯಿತು. ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಖ್ಯಾತ ವೈದ್ಯ ಡಾ.ಡಿ.ಸುರೇಶ್ ರಾವ್, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಬೇಲಾಡಿ ವಿಠಲ ಶೆಟ್ಟಿ, ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಜಗದೀಶ್ ಶೆಟ್ಟಿ ಮಿಂಜಾ, ಖ್ಯಾತ ಕುಸ್ತಿ ಪಟು ಶೌರ್ಯ ಶೆಟ್ಟಿ ರೂಪದರ್ಶಿ ಬ್ರಿನಾಳ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
    ಜಿಲ್ಲಾ ಉಸ್ತುವಾರಿ ಸಚಿವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಯು ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.


    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು,
    ಬಂಟರ ಮಾತೃ ಸಂಘದ ಕಾರ್ಯದರ್ಶಿಎಂ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಟ್ರಸ್ಟಿ ರವಿರಾಜ ಶೆಟ್ಟಿ ನಿಟ್ಟೆಗುತ್ತು, ಕೃಷ್ಣಪ್ರಸಾದ್ ರೈ, ಡಾ ಆಶಾಜ್ಯೋತಿ ರೈ ವಿವಿಧ ಬಂಟರ ಸಂಘಗಳ ಅಧ್ಯಕ್ಷರಾದ ರವೀಂದ್ರ ರೈ ಕಲ್ಲಿಮಾರು, ತಿಮ್ಮಯ್ಯ ಶೆಟ್ಟಿ, ವಸಂತ ಶೆಟ್ಟಿ, ಆನಂದ ಶೆಟ್ಟಿ, ರಾಮಚಂದ್ರ ಕಾವ, ಮಿಥುನ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
    ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲಬೈಲ್ ಹಾಗೂ ಡಾ.ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.

    Post Views: 5

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.