Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರು ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಹೆಚ್ಚಳ
    ಇತ್ತೀಚಿನ ಸುದ್ದಿ

    ಬೆಂಗಳೂರು ಪೊಲೀಸ್ ವಿಭಾಗಗಳ ಸಂಖ್ಯೆ 11ಕ್ಕೆ ಹೆಚ್ಚಳ

    March 7, 2025
    Share

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್‌ನಲ್ಲಿ ಪೊಲೀಸ್ ವಿಭಾಗಗಳ ಸಂಖ್ಯೆಯನ್ನು ಎಂಟರಿಂದ 11 ಕ್ಕೆ ಹೆಚ್ಚಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.ಪ್ರಸ್ತುತ ಬೆಂಗಳೂರು ಉತ್ತರ, ದಕ್ಷಿಣ, ಮಧ್ಯ, ಪೂರ್ವ, ಪಶ್ಚಿಮ, ಆಗ್ನೇಯ, ಈಶಾನ್ಯ ಮತ್ತು ವೈಟ್‌ಫೀಲ್ಡ್ ಸೇರಿ ಎಂಟು ಪೊಲೀಸ್ ವಿಭಾಗಗಳಿವೆ.

    ಇಂದು ವಿಧಾನಸಭೆಯಲ್ಲಿ 2025-26ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಇನ್ನೂ ಮೂರು ಪೊಲೀಸ್ ವಿಭಾಗಗಳೊಂದಿಗೆ, ಪೊಲೀಸ್ ಠಾಣೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ನಗರದಲ್ಲಿ ಇನ್ನೂ ಮೂವರು ಐಪಿಎಸ್ ಅಧಿಕಾರಿಗಳನ್ನು ಡಿಸಿಪಿಗಳಾಗಿ ನೇಮಿಸಲಾಗುವುದು. ಪ್ರತಿದಿನ ಹೆಚ್ಚಿನ ಸೈಬರ್ ಅಪರಾಧಗಳು ವರದಿಯಾಗುತ್ತಿರುವುದರಿಂದ ಐದು ಕೋಟಿ ರೂ. ಅನುದಾನದೊಂದಿಗೆ ಸೈಬರ್ ಅಪರಾಧ ವಿಭಾಗವನ್ನು ಸಹ ಬಲಪಡಿಸಲಾಗುವುದು ಎಂದರು.

    ಶೀಘ್ರದಲ್ಲೇ ಏಳು ಪೊಲೀಸ್ ಠಾಣೆ ಕಟ್ಟಡಗಳು ಪೂರ್ಣಗೊಳ್ಳಲಿವೆ. ಇದಲ್ಲದೆ, 30 ಕೋಟಿ ರೂ. ವೆಚ್ಚದಲ್ಲಿ 12 ಪೊಲೀಸ್ ಠಾಣೆಗಳು, ಒಂದು ಉಪವಿಭಾಗ ಕಚೇರಿ, ಎರಡು ವೃತ್ತ ಕಚೇರಿಗಳು ಮತ್ತು ಒಂದು ಪೊಲೀಸ್ ಔಟ್ ಪೋಸ್ಟ್ ಕಟ್ಟಡದ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು.

    ಈ ವರ್ಷ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ನಾಲ್ಕು ಬಾಂಬ್ ಪತ್ತೆ ಮತ್ತು ವಿಲೇವಾರಿ ದಳಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ತಿಳಿಸಿದರು.

    ಪೊಲೀಸ್ ಸಿಬ್ಬಂದಿಯನ್ನು ಸದೃಢವಾಗಿ ಮತ್ತು ಆರೋಗ್ಯವಾಗಿಡಲು, ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ವೈಯಕ್ತಿಕ ಆರೋಗ್ಯ ತಪಾಸಣೆಗಾಗಿ ನೀಡಲಾಗುವ ಮೊತ್ತವನ್ನು ಪ್ರಸ್ತುತ ರೂ. 1000 ರಿಂದ ರೂ. 1500 ಕ್ಕೆ ಹೆಚ್ಚಿಸಲಾಗುವುದು. ಬಂದೋಬಸ್ತ್ ಕರ್ತವ್ಯದಲ್ಲಿರುವ ಪೊಲೀಸರು ಮತ್ತು ಸಿಬ್ಬಂದಿಗೆ ನೀಡಲಾಗುವ ಆಹಾರ ಭತ್ಯೆಯನ್ನು ರೂ. 200 ರಿಂದ 300 ರೂ. ಗೆ ಹೆಚ್ಚಿಸಲಾಗುವುದು ಎಂದರು. 

    ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡಲಾಗುತ್ತಿದೆ. ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು 10 ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

    Post Views: 258

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.