ಇಸ್ಲಾಮಾಬಾದ್: ಪಾಕಿಸ್ತಾನದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿ ಪಾಕ್ ಜೈಲಿನಲ್ಲಿದ್ದ 199 ಮಂದಿ ಭಾರತೀಯರನ್ನು ಮೇ 12ರ ಶುಕ್ರವಾರದಂದು ಪಾಕ್ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ.
ಸಿಂಧ್ನ ಜೈಲು ವಿಭಾಗದ ಪೊಲೀಸ್ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಭಾರತೀಯ ಮೀನುಗಾರರನ್ನು ಲಾಹೋರ್ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ. ಸದ್ಯಕ್ಕೆ ಈ ಮೀನುಗಾರರು ಲಾಂಧಿ ಜೈಲಿನಲ್ಲಿ ಇರಿಸಲಾಗಿದೆ. 654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿ ಇದ್ದಾರೆ. ಅಂದಾಜು 83 ಪಾಕಿಸ್ತಾನಿ ಮೀನುಗಾರರು ಭಾರತೀಯ ಜೈಲುಗಳಲ್ಲಿದ್ದಾರೆ. 654 ಭಾರತೀಯ ಮೀನುಗಾರರ ಪೈಕಿ 631 ಮಂದಿ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.