Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂದಾಪುರ: ಇನ್ನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು ,ನಾಲ್ವರಿಗೆ ಗಾಯ
    ಇತ್ತೀಚಿನ ಸುದ್ದಿ

    ಕುಂದಾಪುರ: ಇನ್ನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು ,ನಾಲ್ವರಿಗೆ ಗಾಯ

    April 28, 2024
    Share

    ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಯಿತು. ಪರಿಣಾಮ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿದೆ. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 172

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.