Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಲ್ಕಿ: ಪೊಲೀಸರು ಬಂಧಿಸಲು ಬಂದಾಗ ಕೀಟನಾಶಕ ಸೇವಿಸಿದ ಆರೋಪಿ..!
    ಇತ್ತೀಚಿನ ಸುದ್ದಿ

    ಮೂಲ್ಕಿ: ಪೊಲೀಸರು ಬಂಧಿಸಲು ಬಂದಾಗ ಕೀಟನಾಶಕ ಸೇವಿಸಿದ ಆರೋಪಿ..!

    August 25, 2023
    Share

    ಮೂಲ್ಕಿ: ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಾರಂಟ್ ಆದೇಶದಂತೆ ಬಂಧಿಸಲು ಬಂದ ಸಂದರ್ಭದಲ್ಲಿ ಆರೋಪಿಯೋರ್ವ ಕೀಟನಾಶಕ ಸೇವಿಸಿ, ಬಂಧಿಸಿ ಠಾಣೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅಸ್ವಸ್ಥನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ2017 ರಲ್ಲಿ ನಡೆದ ಅಪರಾಧ ಪ್ರಕರಣ ಒಂದರ ಆರೋಪಿಯಾಗಿದ್ದ ಮಂಗಳೂರಿನ ಮುಚ್ಚೂರು ಗ್ರಾಮದ ಕರುಣಾಕರ ಶೆಟ್ಟಿ (44) ಎಂಬವರ ವಿರುದ್ದ ವಾರಂಟ್ ಕಾರ್ಯಗತಗೊಳಿಸುವಂತೆ ನ್ಯಾಯಲಯದ ಆದೇಶ ನೀಡಿತ್ತು.

    ಕರುಣಾಕರ ಶೆಟ್ಟಿ ಉಡುಪಿಯ ಶಿವಳ್ಳಿ ಯಲ್ಲಿರುವ ರಸಿಕ ಬಾರ್ ನಲ್ಲಿ ಕೆಲಸ ಮಾಡಿಕೊಂಡಿರುವ ಬಗೆಗಿನ ಖಚಿತ ಮಾಹಿತಿಯ ಮೇರೆಗೆ ಬಜಪೆ ಪೋಲಿಸ್ ಠಾಣಾ ಉಪನಿರೀಕ್ಷಕರಾದ ಗುರುವಪ್ಪ ಕಾಂತಿ ಮತ್ತು ಸಿಬ್ಬಂದಿಗಳು ಆಗಸ್ಟ್ 24 ರಂದು ಸಂಜೆ ವಾರಂಟ್ ಆದೇಶ ಕಾರ್ಯಗತಗೊಳಿಸಿ ಆರೋಪಿಯನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ಆರೋಪಿ ಕೆಲಸ ಮಾಡಿಕೊಂಡಿರುವ ಉಡುಪಿಯ ಶಿವಳ್ಳಿಯ ರಸಿಕ ಬಾರ್ ಗೆ ಬಂದಿದ್ದರು.

    ಪೊಲೀಸರು ಆಪಾದಿತನನ್ನು ವಶಕ್ಕೆ ಪಡೆಯುವ ಸಮಯ ತಾನು ಬಟ್ಟೆ ಹಾಕಿಕೊಂಡು ಬರುವುದಾಗಿ ಬಾರ್‌ನ ಮೇಲೆ ಇರುವ ರೂಮಿನೊಳಗೆ ಹೋದ ಕರುಣಾಕರ ಯಾವುದೋ ಕೀಟನಾಶಕ ಸೇವನೆ ಮಾಡಿ ಬಂದು ವಾಹನದಲ್ಲಿ ಪ್ರಯಾಣಿಸುವಾಗ ಮಾರ್ಗ ಮಧ್ಯೆ ಅಸ್ವಸ್ಥಗೊಂಡವರನ್ನು, ಬಜಪೆ ಪೋಲಿಸ್ ಠಾಣಾ ಉಪನಿರೀಕ್ಷಕರು ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರ ದಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

    ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.