Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗುಂಡಿಟ್ಟು ಆತ್ಮಹತ್ಯೆಗೈದ ಇನ್ಸ್​ಪೆಕ್ಟರ್..!
    ಇತ್ತೀಚಿನ ಸುದ್ದಿ

    ಗುಂಡಿಟ್ಟು ಆತ್ಮಹತ್ಯೆಗೈದ ಇನ್ಸ್​ಪೆಕ್ಟರ್..!

    February 20, 2024
    Share

    ಕರ್ತವ್ಯನಿರತ ಪೊಲೀಸ್​ ಇನ್ಸ್​ಪೆಕ್ಟರ್​​ ಒಬ್ಬರು ತಾನು ಕರ್ತವ್ಯ ನಿರ್ವಹಿಸುತ್ತಿರುವ ಠಾಣೆಯ ಕ್ಯಾಬಿನ್‌ ನಲ್ಲೇ ಸರ್ವೀಸ್​ ರಿವಾಲ್ವರ್​ನಿಂದ ತನ್ನ ತಲೆಗೆ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಶಿಕ್​ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.ಮೃತ ಪೊಲೀಸ್​ ಇನ್ಸ್​ಪೆಕ್ಟರ್​ರನ್ನು ಅಶೋಕ್​ ನಾಜನ್ ಎಂದು ಗುರುತಿಸಲಾಗಿದೆ​. ಅವರು ನಾಶಿಕ್​ ನಗರದ ಅಂಬಾದ್​ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರು ಬಳಿಕ ಕೆಲವೇ ಕ್ಷಣಗಳಲ್ಲಿ ತಲೆಯಲ್ಲಿ ಬುಲೆಟ್​ ಗಾಯದೊಂದಿಗೆ ಅವರ ಟೇಬಲ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಠಾಣೆಯ ಎಲ್ಲಾ ಸಿಬಂದಿ ಕರ್ತವ್ಯಕ್ಕೆ ಹಾಜರಾದ ಕೆಲವೇ ಕ್ಷಣದಲ್ಲಿ ಕ್ಯಾಬಿನ್‌ ನಿಂದ ಗುಂಡಿನ ಶಬ್ದ ಕೇಳಿಸಿತ್ತು. ಸಿಬಂದಿ ಕ್ಯಾಬಿನ್‌ ಒಳಗೆ ಹೋಗಿ ನೋಡಿದಾಗ ಇನ್ಸ್​ಪೆಕ್ಟರ್​ ಅಶೋಕ್​ ನಾಜನ್ ಶವವಾಗಿ ಬಿದ್ದಿರುವುದು ಕಂಡು ಬಂತು. ಈ ಘಟನೆ ನಾಶಿಕ್​ ನಗರದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

    Post Views: 346

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.