Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ : ಅಂತರ್‌ ಜಿಲ್ಲಾ ಬೈಕ್ ಚೋರರ ಬಂಧನ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ : ಅಂತರ್‌ ಜಿಲ್ಲಾ ಬೈಕ್ ಚೋರರ ಬಂಧನ

    October 30, 2023
    Share

    ಮೂಡುಬಿದಿರೆ: ಉತ್ತರ ಕನ್ನಡ ಮುರುಡೇಶ್ವರ ಠಾಣಾ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡದ ಮೂಡುಬಿದಿರೆಯಿಂದ ಬೈಕ್‌ ಕಳವು ಮಾಡಿರುವ ಅಂತರ್‌ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಪಿ.ಜಿ. ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಆರೋಪಿಗಳಿಂದ ಕಳವು ಮಾಡಿದ 2 ಬೈಕುಗಳು ಸೇರಿ ಒಟ್ಟು 1.80 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    ತುಮಕೂರು ಜಿಲ್ಲೆಯ ಆಕಾಶ್‌ ಕಲ್ಕಿ ಹಾಗೂ ವೀರೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.

    ಮಹಾವೀರ ಕಾಲೇಜಿನ ಎದುರು ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ನಿಲ್ಲಿಸಲು ಹೇಳಿದಾಗ ನಿಲ್ಲಿಸದೇ ಮರಳಿ ಹೋಗುವ ಯತ್ನದ ವೇಳೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಹಾಗೂ ಸಿಬಂದಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆಗ ಮುರುಡೇಶ್ವರ ಮತ್ತು ಜೈನ್‌ ಪಿ.ಯು. ಕಾಲೇಜಿನ ಎದುರು ನಿಲ್ಲಿಸಿದ ಮೋಟಾರು ಬೈಕ್‌ ಕಳ್ಳತನ ಮಾಡಿರುವುದು ಬೆಳಕಿಗೆ ಬಂತು. ಈ ಎರಡು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಇವರ ಮಾರ್ಗದರ್ಶನದಂತೆ, ಡಿಸಿಪಿಗಳಾದ ಸಿದ್ದಾರ್ಥ ಗೊಯಲ್‌, ದಿನೇಶ್‌ ಕುಮಾರ್‌, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್‌ ಕುಮಾರ್‌ ನಾಯ್ಕ ಅವರ ನಿರ್ದೇಶನದಂತೆ ಮೂಡುಬಿದಿರೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಪಿ.ಜಿ. ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.

    Post Views: 155

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.