Facebook Twitter Instagram
    Tuesday, August 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ ನ್ಯಾಯಾಲಯದ ನ್ಯಾಯಾಂಗ ಬಂಧನ ಆದೇಶಕ್ಕೆ ಮಧ್ಯಂತರ ತಡೆ: ಆರೋಪಿಗೆ ಬಿಡುಗಡೆ ಭಾಗ್ಯ-ಏನಿದು ಪ್ರಕರಣ?
    ಇತ್ತೀಚಿನ ಸುದ್ದಿ

    ಬಂಟ್ವಾಳ ನ್ಯಾಯಾಲಯದ ನ್ಯಾಯಾಂಗ ಬಂಧನ ಆದೇಶಕ್ಕೆ ಮಧ್ಯಂತರ ತಡೆ: ಆರೋಪಿಗೆ ಬಿಡುಗಡೆ ಭಾಗ್ಯ-ಏನಿದು ಪ್ರಕರಣ?

    August 11, 2026
    Share

    ಬಂಟ್ವಾಳ: ಆರೋಪಿಯೊಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬಂಟ್ವಾಳ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಧ್ಯಂತರ ತಡೆ ನೀಡಿದ್ದು, ಆರೋಪಿಯನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದೆ.

    2025ರ ಸೆಪ್ಟೆಂಬರ್‌ನಲ್ಲಿ ಆಲಡ್ಕ–ಪಾಣೆಮಂಗಳೂರು ರಸ್ತೆಯಲ್ಲಿ ಬಂಟ್ವಾಳ ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಘಟನೆ ನಡೆದಿತ್ತು. ಆಲಡ್ಕ ಕಡೆಯಿಂದ ಪಾಣೆಮಂಗಳೂರಿನತ್ತ ಸಮವಸ್ತ್ರ ಧರಿಸದೆ ಆಟೋ ರಿಕ್ಷಾ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕನಿಗೆ ಪೊಲೀಸರು ರಿಕ್ಷಾ ನಿಲ್ಲಿಸುವಂತೆ ಸೂಚಿಸಿದ್ದರು.

    ಆದರೆ ಚಾಲಕ ನಿಧಾನವಾಗಿ ರಿಕ್ಷಾ ನಿಲ್ಲಿಸುವಂತೆ ಮಾಡಿ, ಬಳಿಕ ಅಪಾಯಕಾರಿ ರೀತಿಯಲ್ಲಿ ಆಟೋವನ್ನು ತಿರುಗಿಸಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಕಾಲು ಹಾಗೂ ಭುಜಕ್ಕೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 103/2025ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 110, 281 ಹಾಗೂ ಮೋಟಾರು ವಾಹನ ಕಾಯ್ದೆಯ ಕಲಂ 184, 177, 179, 134(a), 134(b) r/w 187ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ಆರೋಪಿಯಾಗಿದ್ದ ಮೊಹಮ್ಮದ್ ಜಾಫರ್ ಅವರನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

    ಆ ಸಂದರ್ಭದಲ್ಲಿ ನ್ಯಾಯಾಧೀಶರಾಗಿದ್ದ ರಾಜೇಂದ್ರ ಪ್ರಸಾದ್ ಅವರು ಆರೋಪಿಯ ಬಂಧನ ಪ್ರಕ್ರಿಯೆಯಲ್ಲಿ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಪಾಲಿಸಲಾಗಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ಬಿಡುಗಡೆಗೊಳಿಸಿದ್ದರು ಎಂದು ತಿಳಿದುಬಂದಿದೆ.ನಂತರ ಪೊಲೀಸರು ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ದೋಷಾರೋಪಣಾ ಪಟ್ಟಿಯನ್ನು ಸ್ವೀಕರಿಸಿದ ನ್ಯಾಯಾಲಯ ಆರೋಪದ ಕುರಿತು ಸಂಜ್ಞೇಯತೆ ಸ್ವೀಕರಿಸಿ, ಆರೋಪಿಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿತ್ತು.

    ಈ ಹಿನ್ನೆಲೆಯಲ್ಲಿ ಆ.5, 2026ರಂದು ಆರೋಪಿ ಮೊಹಮ್ಮದ್ ಜಾಫರ್ ಅವರು ಬಂಟ್ವಾಳ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಧೀಶರಾದ ಸೌಂದರ್ಯ ಎಂ. ಅವರು ಆರೋಪವು ಜಾಮೀನು ರಹಿತ ಪ್ರಕರಣವಾಗಿದ್ದು, ಸೆಷನ್ಸ್ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಒಳಪಡುವುದಾಗಿ ಪರಿಗಣಿಸಿ, ಆರೋಪಿಯನ್ನು ಆ.18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದರು.

    ಈ ಆದೇಶವನ್ನು ಪ್ರಶ್ನಿಸಿ ಆರೋಪಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಪುನರ್ ಪರಿಶೀಲನಾ ಅರ್ಜಿ ಸಂಖ್ಯೆ 109/2026ರ ವಿಚಾರಣೆ ನಡೆಸಿದ ನ್ಯಾಯಾಲಯವು ಬಂಟ್ವಾಳ ನ್ಯಾಯಾಲಯ ನೀಡಿದ್ದ ನ್ಯಾಯಾಂಗ ಬಂಧನದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.ಅಲ್ಲದೆ, ಆರೋಪಿಯನ್ನು ಬಿಡುಗಡೆಗೊಳಿಸುವಂತೆ ಮಧ್ಯಂತರ ಆದೇಶ ಹೊರಡಿಸಿರುವ ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 11, 2026ಕ್ಕೆ ಮುಂದೂಡಿದೆ.

    ಆರೋಪಿ ಪರವಾಗಿ ವಿಟ್ಲದ ವಕೀಲರಾದ ಶಿವಾನಂದ ಎಂ. ವಕ್ಕೆತ್ತಿರಿ ಹಾಗೂ ಉಮೇಶ್ ಕುಮಾರ್ ವೈ. ಅವರು ವಾದ ಮಂಡಿಸಿದ್ದರು.

    Post Views: 7

    Related Posts

    ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು

    August 11, 2026

    ಉಡುಪಿ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

    August 10, 2026

    ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ

    August 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು

    August 11, 2026

    ಬಂಟ್ವಾಳ ನ್ಯಾಯಾಲಯದ ನ್ಯಾಯಾಂಗ ಬಂಧನ ಆದೇಶಕ್ಕೆ ಮಧ್ಯಂತರ ತಡೆ: ಆರೋಪಿಗೆ ಬಿಡುಗಡೆ ಭಾಗ್ಯ-ಏನಿದು ಪ್ರಕರಣ?

    August 11, 2026

    ಉಡುಪಿ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

    August 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.