ಮಡಿಕೇರಿ: ಕೊಡಗು ಜಿಲ್ಲೆಯ ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣವನ್ನು ಕೊಡಗು ಪೊಲೀಸರು ಭೇದಿಸಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಕೊಡಗು ಜಿಲ್ಲೆಯ ಹೆಗ್ಗಳ ಗ್ರಾಮದ ನಾಸಿರುದ್ದೀನ್ ಎಂ.ಯು(26), ಎಡಪಾಲ ಗ್ರಾಮದ ಯಾಹ್ಯಾ ಸಿ.ಹೆಚ್(28), ಕುಂಜಿಲ ಗ್ರಾಮದ ಅಕನಾಸ್(26), ಬೇಟೋಳಿ ಗ್ರಾಮದ ವಾಜಿದ್(26), ಕೇರಳದ ಕಣ್ಣೂರು ಗ್ರಾಮದ ರಿಯಾಜ್(44), ಕಾಸರಗೋಡಿನ ಮೆಹರೂಫ್(37) ಹಾಗೂ ರವೂಫ್(28) ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳಿಂದ 3 ಕೋ.ರೂ.ಬೆಲೆ ಬಾಳುವ 3.31 ಕೆ.ಜಿ ಹೈಡ್ರೋ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಹೈಡ್ರೋ ಗಾಂಜಾವನ್ನು ವಿಮಾನದ ಮೂಲಕ ಭಾರತ ಮತ್ತು ದುಬೈಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಅಂತಾರಾಷ್ಟ್ರೀಯ ವ್ಯವಸ್ಥಿತ ಜಾಲವೊಂದನ್ನು ಕೊಡಗು ಪೊಲೀಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿರುವ ಕೇರಳ ಮೂಲದ ಮುಹಮ್ಮದ್ ಅನೂಫ್ ಎಂಬಾತ ಕೇರಳದ ಕಾಸರಗೋಡಿನ ಮೆಹರೂಫ್, ರವೂಫ್ ಹಾಗೂ ಕೊಡಗಿನ ಬಂಧಿತ ಯುವಕರ ಮೂಲಕ ಭಾರತ ಮತ್ತು ದುಬೈಗೆ ಹೈಡ್ರೋ ಗಾಂಜಾವನ್ನು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಎಂದು ಎಸ್ಪಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿರಾಜಪೇಟೆಯಿಂದ ಮಡಿಕೇರಿಗೆ ಬರುವಾಗ ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸ್ ಅಧಿಕಾರಿಗಳು ವಿರಾಜಪೇಟೆ ರಸ್ತೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.