ಹೊಸದಿಲ್ಲಿ: 9ನೇ ಅಂತರ್ ರಾಷ್ಟ್ರೀಯ ಯೋಗ ದಿನವಾದ ಬುಧವಾರ ದೇಶದ ವಿವಿಧ ಭಾಗಗಳಲ್ಲಿ ಹಲವು ಸಚಿವರು ಹಾಗೂ ಬಿಜೆಪಿ ಮುಖಂಡರು ಯೋಗ ಪ್ರದರ್ಶನ ನೀಡಿ ಯೋಗ ದಿನಾಚರಣೆಯನ್ನು ಆಚರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾಷ್ಟ್ರಪತಿ ಭವನದಲ್ಲಿ ಯೋಗ ಪ್ರದರ್ಶಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೊಚ್ಚಿಯಲ್ಲಿ ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS ವಿಕ್ರಾಂತ್‌ನಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿಗಳೊಂದಿಗೆ ಯೋಗ ಪ್ರದರ್ಶನ ಮಾಡಿದರು.
ದಿಲ್ಲಿಯ ಏಮ್ಸ್‌ನಲ್ಲಿ ನಡೆದ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾಗವಹಿಸಿದ್ದರು.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿ ಅಂತರ್ ರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ನೂರಾರು ಮಂದಿಯನ್ನು ಸೇರಿಕೊಂಡರು
3 ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವಸಂಸ್ಥೆಯ ನಾಯಕತ್ವದೊಂದಿಗೆ ಯೋಗ ಪ್ರದರ್ಶನ ನೀಡಲಿದ್ದಾರೆ.
अंतर्राष्ट्रीय योग दिवस की सभी को बधाई!
— President of India (@rashtrapatibhvn) June 21, 2023
योग हमारी सभ्यता की महान उपलब्धियों में से एक है, और पूरे विश्व के लिए भारत की एक महान सौगात है। योग, शरीर और मन के बीच संतुलन स्थापित करता है। योग, जीवन के प्रति एक समग्र दृष्टिकोण है।
योग हमारे जीवन में बढ़ती चुनौतियों का सामना करने… pic.twitter.com/Iy4xCQ4igq