Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»24 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ
    ಇತ್ತೀಚಿನ ಸುದ್ದಿ

    24 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

    July 23, 2025
    Share

    ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಿನಾಂಕ 22-07-2025 ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿರುತ್ತಾರೆ.ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು. ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಮೊಹಮ್ಮದ್ ಅಬ್ದುಲ್ ಫಯಾನ್(27), ತಂದೆ: ಕೆ ಎಂ ಅಬ್ಬಾಸ್. ವಾಸ: ಬಟ್ಯಡ್ಕ ಮನೆ, ಬದ್ರಿಯ ನಗರ. ಕಲ್ಕಟ್ಟ, ಮಂಜನಾಡಿ, ಮಂಗಳೂರುಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್‌ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

    ಈತ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರ ನಗರ ಪೊಲೀಸ್‌ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಛೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದಲ್ಲದೇ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಕಾರಾಗೃಹದೊಳಗೆ ಇತರ ಖೈದಿಗಳಿಗೆ ಹಲ್ಲೆ ನಡೆಸಿರುವುದಲ್ಲದೇ ಜೈಲು ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನ ನಡೆಸಿದ ಪ್ರಕರಣ ಸೇರಿದಂತೆ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.ಈತನ ವಿರುದ್ಧ ವಿವಿಧ ಪೊಲೀಸ್‌ ಠಾಣೆಗಳಲ್ಲಿನ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 24 ವಾರಂಟ್ ಇರುತ್ತದೆ. ಈತನ ಮೇಲೆ ಕೇರಳ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಸಹ ಹಲವಾರು ಪ್ರಕರಣಗಳು ದಾಖಲಾಗಿರುತ್ತವೆ.ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

    Post Views: 195

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.