Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋವಿಡ್ ಭೀತಿ: ವೆನ್ಲಾಕ್‌ ಆಸ್ಪತ್ರೆಯಲ್ಲಿ 25 ಹಾಸಿಗೆಯಐಸೋಲೇಶನ್ ವಾರ್ಡ್ ಸಿದ್ಧ
    ಇತ್ತೀಚಿನ ಸುದ್ದಿ

    ಕೋವಿಡ್ ಭೀತಿ: ವೆನ್ಲಾಕ್‌ ಆಸ್ಪತ್ರೆಯಲ್ಲಿ 25 ಹಾಸಿಗೆಯಐಸೋಲೇಶನ್ ವಾರ್ಡ್ ಸಿದ್ಧ

    December 28, 2022
    Share

    ಮಂಗಳೂರು: ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೋನ ರೂಪಾಂತರಿ ತಳಿಯ ಹಾವಳಿ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ ಲಕ್ಷಣ ಕಂಡು ಬಂದಲ್ಲಿ ಅವರನ್ನು ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌ ಸಿದ್ದಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ವಿದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆಯಲ್ಲದೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸುವ ವಿದೇಶಿ ಪ್ರಯಾಣಿಕರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಈ ವೇಳೆ ಕೋವಿಡ್‌ ದೃಢಪಟ್ಟರೆ ಆ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಲ್ಯಾಬ್‌ಗೆ ಕಳುಹಿಸಲಾಗುತ್ತದೆ. ಕೋವಿಡ್‌ ದೃಢಪಟ್ಟ ವ್ಯಕ್ತಿಗಳಿಗೆ ಐಸೊಲೇಶನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ.

    ಕೋವಿಡ್‌ ಸೋಂಕನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಆರೋಗ್ಯ ಅಣಕು ಪ್ರದರ್ಶನವು ಮಂಗಳವಾರ ವೆನ್ಲಾಕ್ ಸಹಿತ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗಿದೆ.

    Post Views: 171

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.