ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಟಿತ ಐಟಿಬಿಟಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಕಂಪನಿ ಸೇರಿದಂತೆ ಪೊಲೀಸರಿಗೆ ಆತಂಕ ಸೃಷ್ಟಿಸಿದೆ. ಬೆಂಗಳೂರಿನ ಇಕೋ ಸ್ಪೇಸ್‌ನ ಐಬಿಡಿಓ ಕಂಪನಿಗೆ ಬಾಂಬ್ ಹಾಕುವುದಾಗಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾನೆ. ನಿಮ್ಮ ಕಂಪನಿಯಲ್ಲಿ ಬಾಂಬ್ ಇಟ್ಟಿದ್ದೀವಿ. ಸ್ವಲ್ಪ ಸಮಯದಲ್ಲೇ ಬ್ಲಾಸ್ಟ್ ಆಗುತ್ತೆ ಅಂತಾ ಹೆದರಿಸಿದ್ದಾನೆ. ಕೂಡಲೇ ಕಂಪನಿಯಿಂದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಬೆಳ್ಳಂದೂರು ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಐಎಸ್‌ಡಿ ಅಧಿಕಾರಿಗಳ ತಂಡವೂ ಸ್ಥಳಕ್ಕೆ ಧಾವಿಸಿದ್ದು, ತಪಾಸಣೆ ನಡೆಸಲಾಗ್ತಿದೆ. ಹಳೆ ಉದ್ಯೋಗಿಯಿಂದಲೇ ಬೆದರಿಕೆ ಕರೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಇಕೋ ಸ್ಪೇಸ್‌ನ ಐಬಿಡಿಓ ಹಳೆ ಉದ್ಯೋಗಿಯಿಂದಲೇ ಅನ್ನೋದು ಗೊತ್ತಾಗಿದೆ. ಕೆಲವೇ ದಿನಗಳ ಹಿಂದೆ ಕೆಲಸ ಬಿಟ್ಟಿದ್ದ ವ್ಯಕ್ತಿಯಿಂದ ಹುಸಿ ಬಾಂಬ್ ಕರೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪೊಲೀಸರು ಕಂಪೆನಿಯ ಮಾಜಿ ಉದ್ಯೋಗಿಗಾಗಿ ಹುಡುಕಾಟ ನಡೆಸಿದ್ದಾರೆ.