Facebook Twitter Instagram
    Saturday, November 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನ್ಯಾಯಾಲಯದಲ್ಲಿ ಸುಳ್ಳು ಹೇಳಿಕೆ ನೀಡಿದ ವ್ಯಕ್ತಿಗೆ ಜೈಲು!!
    ಇತ್ತೀಚಿನ ಸುದ್ದಿ

    ಮಂಗಳೂರು: ನ್ಯಾಯಾಲಯದಲ್ಲಿ ಸುಳ್ಳು ಹೇಳಿಕೆ ನೀಡಿದ ವ್ಯಕ್ತಿಗೆ ಜೈಲು!!

    November 21, 2026
    Share

    ಮಂಗಳೂರು: ಯಾವ ಪ್ರಕರಣದಲ್ಲೂ ಯಾವ ಆರೋಪಿಗೆ ತಾನು ಜಾಮೀನು ನೀಡಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿಕೆ ನೀಡಿದ ಆರೋಪಿ ಮುಹಮ್ಮದ್ ಇಸ್ಮಾಯೀಲ್ ಎಂಬಾತನಿಗೆ 2ನೇ ಜೆಎಂಎಫ್‌ಸಿ ನ್ಯಾಯಾಲಯ 3 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    2017ರ ಸೆ.8ರಂದು ಆರೋಪಿ ಇಸ್ಮಾಯಿಲ್ ಮಂಗಳೂರಿನ ಮಾನ್ಯ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಶಪಥ ಪತ್ರದ ಜತೆಗೆ ಘೋಷಣಾ ಪತ್ರವನ್ನು ಸಲ್ಲಿಸಿದ್ದ. ಅದರಲ್ಲಿ ತಾನು ಈವರೆಗೆ ನ್ಯಾಯಾಲಯದ ಯಾವುದೇ ಪ್ರಕರಣ ದಲ್ಲಿ ಯಾವುದೇ ಆರೋಪಿಗೆ ಜಾಮೀನು ನೀಡಿರುವುದಿಲ್ಲ ಎಂದು ಘೋಷಿಸಿದ್ದ. ಆದರೆ ಆರೋಪಿಯು ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ಆರೋಪಿಗೆ ಜಾಮೀನು ನೀಡಿರುವುದು ನ್ಯಾಯಾಲಯದ ಗಮನಕ್ಕೆ ಬಂದಿದೆ.

    ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ:199ರಡಿ ದಂಡಿಸಲ್ಪಡುವ ಅಪರಾಧಕ್ಕೆ ದೂರನ್ನು ದಾಖಲು ಮಾಡಬೇಕೆಂದು ನಿರ್ದೇಶನವಿದೆ. ಅದರಂತೆ ನ್ಯಾಯಾಲಯದ ಮುಖ್ಯ ಲಿಪಿಕ ಅಧಿಕಾರಿ ಆರೋಪಿ ವಿರುದ್ಧ ದೂರು ನೀಡಿದ್ದಾರೆ.

    ವಿಚಾರಣೆಯನ್ನು ಕೈಗೆತ್ತಿಕೊಂಡ 2ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಶಶಿಕಲಾ ಜಿ. ವಾದ-ಪ್ರತಿವಾದಗಳನ್ನು ಆಲಿಸಿ ಆರೋಪಿಗೆ 3 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಸಿದೆ. ದಂಡ ಪಾವತಿಸಲು ತಪ್ಪಿದಲ್ಲಿ ಆರೋಪಿ 1ತಿಂಗಳು ಸಾದಾ ಕಾರಾಗೃಹದ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.

    ಸರಕಾರದ ಪರವಾಗಿ ಅಭಿಯೋಜಕಿ ಸುಮಂಗಲಾ ಚಂದ್ರಶೇಖರ ನಾಯ್ಕ ವಾದ ಮಂಡಿಸಿದ್ದರು.

    Post Views: 7

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    November 21, 2026

    ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್! ಘಟನೆ ಹಿಂದಿನ ವಿಚಾರಗಳನ್ನು ಬಿಚ್ಚಿಟ್ಟ ಕಾಲೇಜಿನ ಡೀನ್

    November 21, 2026

    ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ವ್ಯಕ್ತಿಯ ಕೊಲೆ – ಆರೋಪಿ ಸಂತೋಷ್‌ಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಆರೋಪಿ ಖುಲಾಸೆ

    November 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    November 21, 2026

    ಮಂಗಳೂರು: ನ್ಯಾಯಾಲಯದಲ್ಲಿ ಸುಳ್ಳು ಹೇಳಿಕೆ ನೀಡಿದ ವ್ಯಕ್ತಿಗೆ ಜೈಲು!!

    November 21, 2026

    ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್! ಘಟನೆ ಹಿಂದಿನ ವಿಚಾರಗಳನ್ನು ಬಿಚ್ಚಿಟ್ಟ ಕಾಲೇಜಿನ ಡೀನ್

    November 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.