ಮಂಗಳೂರು : ಸುರತ್ಕಲ್‌ನಲ್ಲಿ ಮುಸ್ಲಿಂ ವ್ಯಾಪಾರಿ ಜಲೀಲ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ
ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಧಪನ ಮಾಡುವ ವೇಳೆ ಮುಸ್ಲಿಂ ಮುಖಂಡರು ಪೊಲೀಸ್ ಆಯುಕ್ತರ ಬಳಿ ಈ ಪ್ರಕರಣ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿದ್ದಾರೆ ಈ ಘಟನೆ ಸಂಬಂದ 4-5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ ಇಬ್ಬರು ಮಹಿಳೆಯರನ್ನ ಕೂಡಾ ವಿಚಾರಣೆ ನಡೆಸಲಾಗುತ್ತಿದ ಎಂದು ಮಾಹಿತಿ ಲಭ್ಯವಾಗಿದೆ
ಮಂಗಳೂರು ನಗರದ ಸುರತ್ಕಲ್ ಸಮೀಪದ ಕೃಷ್ಣಾಪುರದ ನಾಲ್ಕನೇ ಬ್ಲಾಕ್‌ನ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳಿಬ್ಬರು, ಅಂಗಡಿ ಮಾಲೀಕ ಜಲೀಲ್ ಎಂಬುವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 6ರಿಂದ ಡಿಸೆಂಬರ್ 27ರ ಬೆಳಗ್ಗೆ 6 ರವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.